ರಾಜ್ಯ ವಸತಿ ಶಾಲೆ ಶಿಕ್ಷಕರಿಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್

 

 

 

 

ಬೆಂಗಳೂರು: ರಾಜ್ಯದ ವಿವಿಧ ವಸತಿ ಶಾಲೆಗಳಲ್ಲಿ ಖಾಲಿ ಇದದಂತ ಶಿಕ್ಷಕರ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸ್ಪರ್ಧಾತ್ಮಕ ಪರೀಕ್ಷೆಯ ಬಳಿಕ, ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿನ ಮೂರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿನ ವಿವಿಧ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿತ್ತು ಎಂದಿದೆ.

 

 

ಈಗಾಗಲೇ ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಅಂತಿಮ ಪಟ್ಟಿಯ ಬಳಿಕ, ಈಗ ಶೇ.30ರಷ್ಟು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಹಾಗೂ ಇಲಾಖೆಯು ಹೆಚ್ಚುವಾರು ಹೆಚ್ಚುವರಿ ಆಯ್ಕೆಪಟ್ಟಿಗಾಗಿ ಸಲ್ಲಿಸಿರುವ ಬೇಡಿಕೆಯ ಪ್ರಸ್ತಾವನೆಗೆ ಅನುಗುಣವಾಗಿ ಹೆಚ್ಚುವರಿ ಆಯ್ಕೆಪಟ್ಟಿಗಳನ್ನು ಸಿದ್ಧಪಡಿಸಿ ಪ್ರಕಟಿಸಲು ಕ್ರಮವಹಿಸಿರುವುದಾಗಿ ತಿಳಿಸಿದೆ.

ಹೀಗಿದೆ ಹೆಚ್ಚುವರಿ ಆಯ್ಕೆ ಪಟ್ಟಿ ಹುದ್ದೆಗಳ ವಿವರ

[t4b-ticker]

You May Also Like

More From Author

+ There are no comments

Add yours