ಗ್ಯಾರಂಟಿಗಳ ಮನೆ ಒಡತಿ ಮತ್ತ ನಿರುದ್ಯೋಗಿ  ಭತ್ಯೆಗೆ ಸರ್ಕಾರಿ ಆದೇಶ , ಕಂಡಿಷನ್ಸ್ ಏನು.

ಗ್ಯಾರಂಟಿಗಳ ಮನೆ ಒಡತಿ ಮತ್ತ ನಿರುದ್ಯೋಗಿ ಭತ್ಯೆಗೆ ಸರ್ಕಾರಿ ಆದೇಶ , ಕಂಡಿಷನ್ಸ್ ಏನು.

Listen to this article

ಬೆಂಗಳೂರು: ಮೊದಲ ಸಂಪುಟ ಸಭೆಯಲ್ಲೇ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಅದರಂತೆ ಇಂದು ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 8 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚ ಸ್ವೀಕರಿಸಿದ ಬೆನ್ನಲ್ಲೇ, ರಾಜ್ಯ ಸರ್ಕಾರದಿಂದ ಯಜಮಾನಿ ಮಹಿಳೆಗೆ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ.

ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ನಡವಳಿಗಳನ್ನು ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ರಾಜ್ಯದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2,000 ಗಳನ್ನು ನೀಡುವ ಗೃಹ ಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ತಾತ್ವಿಕ ಅನುಮೋದನೆ ನೀಡಲಾಗಿದೆ ಎಂದಿದ್ದಾರೆ.

ಗೃಹ ಲಕ್ಷ್ಮಿ ಯೋಜನೆಯ ವಿವರವಾದ ರೂಪರೇಷೆ ಹಾಗೂ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು. ಈ ಆದೇಶವನ್ನು ದಿನಾಂಕ 20-05-2023ರಂದು ನಡೆದ ಸಚಿವ ಸಂಪುಟದ ತೀರ್ಮಾನದಂತೆ ಹೊರಡಿಸಲಾಗಿದೆ ಎಂದಿದ್ದಾರೆ.

ನಿರುದ್ಯೋಗಿ ಡಿಪ್ಲೋಮಾ, ಪದವಿಧರರಿಗೆ ಗುಡ್ ನ್ಯೂಸ್: ‘ಯುವನಿಧಿ ಯೋಜನೆ’ಯಡಿ ಭತ್ಯೆ, ಈ ಕಂಡೀಷನ್ ಅಪ್ಲೈ

ಬೆಂಗಳೂರು: ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಚುನಾವಣಾ ಪ್ರಣಾಳಿಕೆಯಲ್ಲೂ ಘೋಷಿಸಲಾಗಿತ್ತು. ಅದರಂತೆ ನಿರುದ್ಯೋಗಿ ಪದವೀಧರರು, ಡಿಪ್ಲೋಮಾದರರಿಗೆ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.

 

 

ಇಂದು ನೂತನ ಸರ್ಕಾರ ರಚನೆಯ ಬಳಿಕ, ಮೊದಲ ಕ್ಯಾಬಿನೆಟ್ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ನಾವು ಘೋಷಿಸಿರುವಂತ ಐದು ಗ್ಯಾರಂಟಿ ಯೋಜನೆಗಳಿಗೆ 50 ಸಾವಿರ ಕೋಟಿ ಆಗಬಹುದು ಎಂಬುದಾಗಿ ಅಂದಾಜಿಸಲಾಗಿದೆ. ಅದೆಷ್ಟೇ ಆದರೂ ನಾವು ಘೋಷಿಸಿರುವಂತ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸುವುದಾಗಿ ತಿಳಿಸಿದರು.

ಈ ವರ್ಷ ಪದವಿ, ಡಿಪ್ಲೋಮಾದಾರರಾಗಿ ನಿರುದ್ಯೋಗಿಗಳಾದಂತವರಿಗೆ ಯುವನಿಧಿ ಯೋಜನೆಯ ಅಡಿಯಲ್ಲಿ ಪದವೀಧರರಿಗೆ 3,000ವನ್ನು ಪ್ರತಿ ತಿಂಗಳು, ಡಿಪ್ಲೋಮಾದಾರರಿಗೆ ರೂ.1,500 ನೀಡಲಾಗುತ್ತದೆ. ಎರಡು ವರ್ಷಗಳ ವರೆಗೆ ಮಾತ್ರ ಈ ಯೋಜನೆಯಲ್ಲಿ ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ. 2 ವರ್ಷದ ಅವಧಿಯ ಒಳಗೆ ಪದವೀಧರರು, ಡಿಪ್ಲೋಮಾದಾರರಿಗೆ ಕೆಲಸ ಸಿಕ್ಕರೆ ಯುವ ನಿಧಿಯಡಿ ನೀಡುವಂತ ಭತ್ಯೆಯನ್ನು ನಿಲ್ಲಿಸಲಾಗುತ್ತದೆ ಎಂಬುದಾಗಿ ಹೇಳಿದರು.

ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ಮನೆಯ ಯಜಮಾನಿಗೆ, ದಿನೇ ದಿನೇ ಅಗತ್ಯ ವಸ್ತುಗಳ ಬೆಲೆಯಿಂದ ತತ್ತರಿಸುವಂತ ಒಡತಿಗೆ ಪ್ರತಿ ತಿಂಗಳು ರೂ.2,000 ಅಕೌಂಟ್ ಗೆ ಡೆಪಾಸಿಟ್ ಮಾಡಲಾಗುತ್ತದೆ ಎಂದರು.

ನಮ್ಮ ಐದು ಯೋಜನೆಗಳಿಗೆ ಯಾವುದಕ್ಕೆ ಎಷ್ಟು ಖರ್ಚು ಆಗಲಿದೆ ಎನ್ನುವ ಬಗ್ಗೆ ಇನ್ನೂ ಚರ್ಚಿಸಲಾಗಿಲ್ಲ. ಮುಂದಿನ ಸಚಿವ ಸಂಪುಟ ಸಭೆಯ ವೇಳೆಗೆ ಎಲ್ಲಾ ಸಂಪೂರ್ಣ ಮಾಹಿತಿಯೊಂದಿಗೆ ಯೋಜನೆಗಳನ್ನು ಅಧಿಕೃತವಾಗಿ ಜಾರಿಗೊಳಿಸುವ ಆದೇಶವನ್ನು ಹೊರಡಿಸಲಾಗುತ್ತದೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಐದು ಯೋಜನೆಗಳ ಜಾರಿಗೆ ತಾತ್ವಿಕ ಒಪ್ಪಿಗೆ ಸೂಚಿಸಲಾಗಿದೆ ಎಂಬುದಾಗಿ ತಿಳಿಸಿದರು.

 

Trending Now

Leave a Reply

Your email address will not be published. Required fields are marked *

Trending Now