ಸರ್ಕಾರಿ ನೌಕರರ 7ನೇ ವೇತನ ಕಾರ್ಯಕ್ಕೆ ಚುರುಕು 44 ಹುದ್ದೆ ಸೃಷ್ಟಿಸಿ ಸರ್ಕಾರ ಆದೇಶ

 

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆ ಸಂಬಂಧ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅವರ ಅಧ್ಯಕ್ಷತೆಯಲ್ಲಿ ತ್ರಿಸದಸ್ಯರ ಏಳನೇ ರಾಜ್ಯವೇತನ ಆಯೋಗ ರಚನೆ ಮಾಡಲಾಗಿದೆ.

ಈ ಆಯೋಗದ ಕಾರ್ಯನಿರ್ವಹಣೆಗೆ ಪೂರಕವಾಗಿ 44 ಹುದ್ದೆಗಳನ್ನು ಸೃಷ್ಟಿಸಿ ಸರ್ಕಾರ ಆದೇಶ ಹೊರಡಿಸಿದೆ.

ಐಎಎಸ್ ವೃಂದದ ಒಬ್ಬರು ಆಯೋಗದ ಕಾರ್ಯದರ್ಶಿ ಆಗಲಿದ್ದಾರೆ. ಹೆಚ್ಚುವರಿ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಉಪ ಕಾರ್ಯದರ್ಶಿ, ಅಧೀನ ಕಾರ್ಯದರ್ಶಿ, ಶಾಖಾಧಿಕಾರಿ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಇದರೊಂದಿಗೆ ಗ್ರೂಪ್ ಸಿ 25 ಹುದ್ದೆಗಳನ್ನು ಮಂಜೂರು ಮಾಡಲಾಗಿದೆ.

ವೇತನ ಆಯೋಗಕ್ಕೆ ಸಿಬ್ಬಂದಿ ನೇಮಕ ಮಾಡಿಕೊಳ್ಳುವ ಸ್ವಾತಂತ್ರ್ಯ ನೀಡಲಾಗಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಸಚಿವಾಲಯದ ಸೇವೆ ಅಥವಾ ಇಲಾಖೆಗಳಿಂದ ನಿಯೋಜನೆ ಮೇಲೆ ಈ ಹುದ್ದೆಗಳ ಭರ್ತಿಗೆ ಸೂಚನೆ ನೀಡಲಾಗಿದೆ.

[t4b-ticker]

You May Also Like

More From Author

+ There are no comments

Add yours