ಆರಂಬೋಡಿ: ಕಾಂಗ್ರೆಸ್ ಪಕ್ಷಕ್ಕೆ ಶೇಖರ ಕುಕ್ಕೇಡಿಯವರಂತಹ ನಿಷ್ಠಾವಂತ ನಾಯಕರ ಅಗತ್ಯವಿದ್ದು, ಬೇಡಿಕೆಗೆ ಸರಕಾರ ಸ್ಪಂದಿಸುವ ಕೆಲಸ ಮಾಡಬೇಕು, ಅವರ ಮನವೊಲಿಸಿ ರಾಜೀನಾಮೆಯನ್ನು ಹಿಂಪಡೆಯುವಂತೆ ಮಾಡಬೇಕು ಎಂದು ಬೆಳ್ತಂಗಡಿ ತಾಲೂಕು ಕಾಂಗ್ರೆಸ್ ಪಕ್ಷದ ಯುವ ನಾಯಕ ಸುದರ್ಶನ್ ಕರ್ಕೇರ ಮಂಜಿಲ ಆಗ್ರಹಿಸಿದ್ದಾರೆ.
ಒಬ್ಬ ನಿಷ್ಠಾವಂತ ನಾಯಕನನ್ನು ಪಕ್ಷ ಕಳೆದುಕೊಳ್ಳುವುದು ಒಳ್ಳೆಯದಲ್ಲ, ಜಿಲ್ಲಾ ನಾಯಕರು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಅವರ ಬೇಡಿಕೆಯನ್ನು ಶೀಘ್ರವಾಗಿ ಈಡೇರಿಸುವ ಕೆಲಸ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.





