ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸಂಭಾವ್ಯ ವೇಳಪಟ್ಟಿ ಸಲ್ಲಿಸಿ: ಹೈಕೋರ್ಟ್

 

 

 

 

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸ್ಪಷ್ಟ ನಿಲುವು ತಾಳಿದ್ದು, ಸಂಭಾವ್ಯ ವೇಳಾಪಟ್ಟಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ ಗೆ ಸಲ್ಲಿಸಿದೆ.
ಮುಖ್ಯ ನ್ಯಾಯಾಧೀಶ ಅಭಯ್ ಶ್ರೀನಿವಾಸ ಓಕಾ ಮತ್ತು ನ್ಯಾಯಾಧೀಶ ಅಶೋಕ್ ಕೆ ಕಿನಾಗಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಹಿರಿಯ ವಕೀಲ ಕೆ.ಎನ್. ಫಣೀಂದ್ರ, ರಾಜ್ಯ ಚುನಾವಣಾ ಆಯೋಗದ ಪರ ಸಂಭಾವ್ಯ ವೇಳಾಪಟ್ಟಿಯನ್ನು ಸಲ್ಲಿಸಿದರು. ಈ ವೇಳಾಪಟ್ಟಿಯಂತೆ ಚುನಾವಣೆ ನಡೆಸಲು ಚುನಾವಣೆ ನಡೆಸಲು ನಿರ್ಧರಿಸಿರುವುದಾಗಿ ಅವರು ಹೇಳಿದರು.
ಸ್ಪಷ್ಟ ನಿಲುವು ತಾಳುವಂತೆ ಹೈಕೋರ್ಟ್ ನಿರ್ದೇಶನದ ನಂತರ ರಾಜ್ಯ ಚುನಾವಣಾ ಆಯೋಗ, ವೇಳಾಪಟ್ಟಿ ಸಲ್ಲಿಸಿದೆ.  ಆದ್ದರಿಂದ ಚುನಾವಣೆಗಳನ್ನು ಮುಂದೂಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ವಾದಗಳನ್ನು ಪರಿಶೀಲಿಸಿದ ನಂತರ ನ್ಯಾಯಪೀಠ ಆದೇಶ ಹೊರಡಿಸುವ ಸಾಧ್ಯತೆಯಿದೆ.
ಚುನಾವಣೆ ಮುಂದೂಡುವಂತೆ ರಾಜ್ಯ ಸರ್ಕಾರದಿಂದ ಪತ್ರ ಬಂದಿರುವುದಾಗಿ ಚುನಾವಣಾ ಆಯೋಗದಿಂದ ಪತ್ರ ಬಂದಿದೆ. ಒಂದು ವೇಳೆ ಚುನಾವಣೆಯನ್ನು ಮುಂದೂಡಿದರೆ, ಬಿಬಿಎಂಪಿ ಸೇರಿದಂತೆ ಇನ್ನಿತರ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳಾಪಟ್ಟಿಯೂ ಅಸ್ತವ್ಯಸ್ತಗೊಳ್ಳಲಿದೆ ಎಂದು ಚುನಾವಣಾ ಆಯೋಗ ಪರ ವಕೀಲರು ಹೇಳಿದರು.

 

 

ಈ ಮಧ್ಯೆ, ಪ್ರಮುಖ ಮೂರು ರಾಜಕೀಯ ಪಕ್ಷಗಳು ಒಟ್ಟಾಗಿ ಚುನಾವಣೆ ಮುಂದೂಡುವಂತೆ ಕೋರಿರುವ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲು ಆಯೋಗಕ್ಕೆ ಕೇಳಿಕೊಂಡಿರುವುದಾಗಿ ರಾಜ್ಯ ಸರ್ಕಾರದ ಪರ ವಕೀಲರು ತಮ್ಮ ವಾದ ಮಂಡಿಸಿದರು.
ಕೇವಲ ಎರಡು ಪಕ್ಷಗಳು ಚುನಾವಣೆ ಮುಂದೂಡುವಂತೆ ಕೇಳಿಕೊಂಡಿರುವುದಾಗಿ ರಾಜ್ಯ ಚುನಾವಣಾ ಆಯೋಗ ಪರ ವಕೀಲರು ಸ್ಪಷ್ಟಪಡಿಸಿದರು. ಬಿಹಾರ ವಿಧಾನಸಭಾ ಚುನಾವಣೆಯನ್ನು ಉಲ್ಲೇಖಿಸಿದ ನ್ಯಾಯಪೀಠ, ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಏಕೆ ಕಷ್ಟವಾಗಿದೆ ಎಂದು ಕೇಳಿತು.
ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲು ಅಡ್ವೋಕೆಟ್ ಜನರಲ್ ಗಾಗಿ ಸಮಾಯಾವಕಾಶವನ್ನು  ಸರ್ಕಾರದ ಪರ ವಕೀಲರು ಕೇಳಿಕೊಂಡರು. ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 21ಕ್ಕೆ ಮುಂದೂಡಿತು. 

[t4b-ticker]

You May Also Like

More From Author

+ There are no comments

Add yours