ಬೆಂಗಳೂರು: ಕರ್ನಾಟಕ ಸರ್ಕಾರವು ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ದಂಡದ ಮೇಲೆ 50% ರಿಯಾಯಿತಿ ಘೋಷಿಸಿದೆ. ಈ ಸಂಬಂಧ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಇಂದು (ನವೆಂಬರ್ 20) ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಸೌಲಭ್ಯವು ನಾಳೆಯಿಂದ ಅಂದರೆ ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಚಾಲಕರು ತಮ್ಮ ಬಾಕಿ ದಂಡವನ್ನು ಅರ್ಧ ಮೊತ್ತಕ್ಕೆ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.
ಸಂಚಾರ ದಂಡ ರಿಯಾಯಿತಿ ಕುರಿತಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿದ ಬಳಿಕ, ಸರ್ಕಾರವು ಅದನ್ನು ಅಂಗೀಕರಿಸಿ ತಕ್ಷಣ ಜಾರಿಗೆ ತರಲು ಆದೇಶ ಹೊರಡಿಸಿದೆ.









