ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸೋದು ಹೇಗೆ, ಯಾವ ದಾಖಲೆಗಳು ಕಡ್ಡಾಯವಾಗಿ ಬೇಕು.

 

ಬೆಂಗಳೂರು: ಜೂ.18: How Apply Online for Gruha Lakshmi Scheme: ರಾಜ್ಯ ಸರ್ಕಾರ ಘೋಷಿಸಿರುವ ತಿಂಗಳಿಗೆ 2 ಸಾವಿರ ಪಡೆಯುವ ಗೃಹಲಕ್ಷ್ಮೀ ಯೋಜನೆಗೆ ಸೇವಾಸಿಂಧು ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ವಿಧಾನ ಹಾಗೂ ಯಾವ ದಾಖಲೆಗಳು ಬೇಕು ಎಂಬುದರ ವಿವರ ಇಲ್ಲಿದೆ.
ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಹೆಣ್ಣು ಮಕ್ಕಳಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಆನ್‌ಲೈನ್‌ ಹಾಗೂ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಬಿಪಿಎಲ್ ಮತ್ತು ಅಂತ್ಯೋದಯ ಯೋಜನೆಯ ಫಲಾನುಭವಿಗಳು ‘ಗೃಹಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಪೋರ್ಟಲ್‌ಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವಿಲ್ಲ ಹಾಗೂ ಕೊನೆಯ ದಿನಾಂಕವನ್ನು ನಿಗದಿ ಪಡಿಸಿಲ್ಲ.

ʼಆನ್‌ಲೈನ್‌ ಆಫ್‌ಲೈನ್‌ ಎರಡರಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕವನ್ನು ನಿಗದಿ ಪಡಿಸಿಲ್ಲ, ಅಲ್ಲದೇ ವರ್ಷವಿಡೀ ಅರ್ಜಿ ಸಲ್ಲಿಸಬಹುದುʼ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ಗೃಹಲಕ್ಷ್ಮೀ ಯೋಜನೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವಿಧಾನ
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರು ಸೇವಾಸಿಂಧು ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸುವ ಅವಕಾಶವಿದೆ.

* ಮೊದಲು ಸೇವಾಸಿಂಧು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

https://sevasindhuservices.karnataka.gov.in/
* ಮೊದಲ ಬಾರಿ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಬೇಕು. ಇದಕ್ಕಾಗಿ New user ? Register here ಇಲ್ಲಿ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ಹಾಕಿ ಅಕೌಂಟ್‌ ಕ್ರಿಯೇಟ್ ಮಾಡಿಕೊಳ್ಳಿ.

* ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್‌ವರ್ಡ್‌ ಅಥವಾ ಓಟಿಪಿ ಮೂಲಕ ಲಾಗಿನ್ ಆಗಿ. ಅದರಲ್ಲಿ ಗೃಹಲಕ್ಷ್ಮೀ ಯೋಜನೆ ಆಯ್ಕೆ ಮಾಡಿ.
ಗೃಹಲಕ್ಷ್ಮೀ ಯೋಜನೆಯ ಟ್ಯಾಬ್‌ನಲ್ಲಿ ಅರ್ಜಿ ಫಾರಂ ಅನ್ನು ಡೌನ್‌ಲೋಡ್‌ ಮಾಡಿಕೊಂಡು ಭರ್ತಿ ಮಾಡಿ.

* ಅರ್ಜಿಯಲ್ಲಿ ಅರ್ಜಿದಾರರ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ. ಅರ್ಜಿ ಫಾರಂನಲ್ಲಿ ತಿಳಿಸಿರುವ ಎಲ್ಲಾ ದಾಖಲೆಗಳೊಂದಿಗೆ, ಭರ್ತಿ ಮಾಡಿದ ಅರ್ಜಿ ಫಾರಂ ಹಾಗೂ ದಾಖಲೆಗಳನ್ನು ಸಲ್ಲಿಸಿ.

ಗೃಹಲಕ್ಷ್ಮೀ ಯೋಜನೆಗೆ ಬೇಕಾಗುವ ಅಗತ್ಯ ದಾಖಲೆಗಳು
* ಆಧಾರ್‌ ಕಾರ್ಡ್‌

* ರೇಷನ್‌ ಕಾರ್ಡ್‌

* ಬ್ಯಾಂಕ್‌ ಪಾಸ್‌ ಪುಸ್ತಕ

* ವಿಳಾಸ ದಾಖಲಾಗಿರುವ ಗುರುತಿನ ಚೀಟಿ

ಟ್ಯಾಕ್ಸ್‌ ಪಾವತಿಸುವವರು, ಜಿಎಸ್‌ಟಿ ರಿಟರ್ನ್ಸ್‌ ಸಲ್ಲಿಸುವವರು ಈ ಯೋಜನೆಗೆ ಅರ್ಹರಾಗುವುದಿಲ್ಲ. ಯೋಜನೆಯ ಫಲಾನುಭವಿಗಳು ಬ್ಯಾಂಕ್‌ ಖಾತೆಯೊಂದಿಗೆ ಆಧಾರ್‌ ಕಾರ್ಡ್‌ ಜೋಡಣೆ ಮಾಡುವುದು ಕಡ್ಡಾಯವಾಗಿದೆ.

[t4b-ticker]

You May Also Like

More From Author

+ There are no comments

Add yours