ರಾಜ್ಯ ಸರ್ಕಾರಗಳು ಮತ್ತು ಕೈಗಾರಿಕಾ ವಲಯದಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆಸರಕು ಮತ್ತು ಸೇವಾ ತೆರಿಗೆ ೪೬ನೇ ಮಂಡಳಿ ಸಭೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಪ್ರಗತಿಯಲ್ಲಿದ್ದು, ಜನವರಿ ಒಂದರಿಂದಲೇ ಅನ್ವಯವಾಗುವಂತೆ ಜಿಎಸ್ಟಿ ದರ ಏರಿಕೆ ಮಾಡಲು ಉದ್ದೇಶಿಸಲಾಗಿತ್ತು ಆದರೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಿರ್ಧಾರವನ್ನು ಮುಂದೂಡಲಾಗಿದೆ.
೨೦೨೨ರ ಫೆಬ್ರವರಿ ಒಂದರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ೨೦೨೨-೨೩ ನೇ ಸಾಲಿನ ಮುಂಗಡಪತ್ರ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಆ ಸಂದರ್ಭದಲ್ಲಿ ಪ್ರಮಾಣ ಹೆಚ್ಚಳ ಮಾಡಬೇಕಾ ಅಥವಾ ಮಂಡಳಿ ಸಭೆಯಲ್ಲಿ ಚರ್ಚಿಸಿ ಈಗ ಮಾಡಬೇಕು ಎನ್ನುವ ಕುರಿತಂತೆ ಎಲ್ಲ ರಾಜ್ಯಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಅಂತಿಮವಾಗಿ ಮುಂದೂಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸದ್ಯಕ್ಕೆ ಪಾದರಕ್ಷೆ ಮತ್ತು ಜವಳಿ ಉತ್ಪನ್ನಗಳ ಮೇಲೆ ಜಿಎಸ್ಟಿ ತೆರಿಗೆ ಹೆಚ್ಚಳ ಮಾಡುವುದನ್ನು ಮುಂದೂಡಿ ಮುಂಗಡಪತ್ರ ಮಂಡನೆಗೆ ಮಾಡಬೇಕು ಎನ್ನುವ ಪ್ರಸ್ತಾಪಗಳು ವ್ಯಕ್ತವಾಗಿವೆ ಎನ್ನಲಾಗಿದೆ.
ಸಭೆಯಲ್ಲಿ ಹಣಕಾಸು ಖಾತೆ ರಾಜ್ಯ ಸಚಿವರಾದ ಡಾ.ಭಾಗ್ ವತ್ ಕರದ್, ಎಂಪಿಪಿ ಚೌದರಿ ಸೇರಿದಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಹಣಕಾಸು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
+ There are no comments
Add yours