ಐಪಿಎಲ್ ಟ್ರೋಪಿ ಮುಡಿಗೇರಿಸಿಕೊಂಡ ಗುಜರಾತ್ ಟೈಟಾನ್ಸ್ ,ಆರೇಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಯಾರಿಗೆ.

 

ಅಹಮ್ಮದಾಬಾದ್:ಮೇ-30:  ಈ ಬಾರಿಯ ಐಪಿಎಲ್ 2022 ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್  ಹೊಸ  ಇತಿಹಾಸ ಸೃಷ್ಟಿಸಿದೆ. ಫೈನಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಗೆಲುವು ದಾಖಲಿಸುವ  ಮೂಲಕ ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಪಿ ಗೆದ್ದುಕೊಂಡಿದೆ.

ಗೆಲುವಿಗೆ 130 ರನ್ ಟಾರ್ಗೆಟ್ ಪಡೆದ ಗುಜರಾತ್ ಟೈಟಾನ್ಸ್ ಆರಂಭದಲ್ಲಿ ವಿಕೆಟ್ ಕಳೆದುಕೊಂಡು ಆತಂಕ ಎದುರಿಸಿತು. ವೃದ್ಧಿಮಾನ್ ಸಾಹ ಕೇವಲ 5 ರನ್ ಸಿಡಿಸಿ ಔಟಾದರು. ಇತ್ತ ಮ್ಯಾಥ್ಯೂ ವೇಡ್ 8 ರನ್ ಸಿಡಿಸಿ ನಿರಾಸೆ ಅನುಭವಿಸಿ ತಂಡ ಸಂಕಷ್ಟಕ್ಕೆ ಹೀಡಾಗಿತ್ತು.. ಆದರೆ ಶುಭಮನ್ ಗಿಲ್ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಜೊತೆಯಾಟದಿಂದ ಗುಜರಾತ್ ಟೈಟಾನ್ಸ್ ಚೇತರಿಸಿಕೊಂಡಿತು.

ಹಾರ್ದಿಕ್ ಪಾಂಡ್ಯ 30 ರನ್ ಸಿಡಿಸಿ ಔಟಾದರು. ಆದರೆ ಗಿಲ್ ಹೋರಾಟ ಮುಂದುವರಿಸಿದರು.ಇತ್ತ ಡೇವಿಡ್ ಮಿಲ್ಲರ್ ಕೂಡ ಉತ್ತಮ ಸಾಥ್ ನೀಡಿದರು. ಮಿಲ್ಲರ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಗಿಲ್ ಅಜೇಯ 45 ರನ್ ಸಿಡಿಸಿದೆ, ಮಿಲ್ಲರ್ 19 ಎಸೆತದಲ್ಲಿ 32 ರನ್ ಸಿಡಿಸಿದರು. ಈ ಮೂಲಕ ಗುಜರಾತ್ ಟೈಟಾನ್ಸ್ 18.1 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.ರಾಜಸ್ಥಾನ ವಿರುದ್ಧ 7 ವಿಕೆಟ್ ಗೆಲುವು ದಾಖಲಿಸಿದ ಗುಜರಾತ್ ಟೈಟಾನ್ಸ್ ಐಪಿಎಲ್ ಪ್ರಶಸ್ತಿಯನ್ನು ತನ್ನ  ಮುಡಿಗೇರಿಸಿಕೊಂಡಿತು.

ಈ ಗೆಲುವಿನೊಂದಿಗೆ ಗುಜರಾತ್ ಟೈಟಾನ್ಸ್ ಮೊದಲ ಪ್ರಯತ್ನದಲ್ಲೇ ಐಪಿಎಲ್ ಟ್ರೋಪಿ ಗೆದ್ದ ಸಾಧನೆ ಮಾಡಿದೆ.ಇನ್ನು ಲೀಗ್ ಹಂತದಲ್ಲಿ ಮೊದಲ ಸ್ಥಾನ ಪಡೆದು ಟ್ರೋಫಿ ಗೆದ್ದ ಮೂರನೇ ತಂಡ ಗುಜರಾತ್ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ.

ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದು ಟ್ರೋಪಿ ಗೆದ್ದ ತಂಡ:
ರಾಜಸ್ಥಾನ ರಾಯಲ್ಸ್, 2008
ಮುಂಬೈ ಇಂಡಿಯನ್ಸ್, 2017, 2019 ಹಾಗೂ 2020
ಗುಜರಾತ್ ಟೈಟಾನ್ಸ್, 2022

ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಹೊಸ ದಾಖಲೆ ಬರೆದಿದ್ದಾರೆ. ಐಪಿಎಲ್ ಟ್ರೋಫಿ ಗೆದ್ದ 4ನೇ ಭಾರತದ ನಾಯಕ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರ

ಆರೇಂಜ್ ಕ್ಯಾಪ್
ಐಪಿಎಲ್ 2022 ಟೂರ್ನಿಯಲ್ಲಿ 16 ಪಂದ್ಯಗಳಿಂದ 824 ರನ್ ಸಿಡಿಸಿದ ರಾಜಸ್ಥಾನ ರಾಯಲ್ಸ್ ತಂಡದ ಜೋಸ್ ಬಟ್ಲರ್ ಆರೇಂಜ್ ಕ್ಯಾಪ್ ಪ್ರಶಸ್ತಿ ಗೆದ್ದುಕೊಂಡರು.

ಪರ್ಪಲ್ ಕ್ಯಾಪ್
ರಾಜಸ್ಥಾನ ರಾಯಲ್ಸ್ ತಂಡದ ಸ್ಪಿನ್ನರ್ ಯಜುವೇಂದ್ರ ಚಹಾಲ್ 17 ಪಂದ್ಯಗಳಿಂದ 27 ವಿಕೆಟ್ ಕಬಳಿಸುವ ಮೂಲಕ ಪರ್ಪಲ್ ಕ್ಯಾಪ್ ಗೆದ್ದುಕೊಂಡಿದ್ದಾರೆ.

ರಾಜಸ್ಥಾನ ಇನ್ನಿಂಗ್ಸ್
ಫೈನಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಯಿತು. ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ದಾಳಿಗೆ ರಾಜಸ್ಥಾನ ತತ್ತರಿಸಿತ್ತು. ಜೋಸ್ ಬಟ್ಲರ್ 39 ರನ್ ಸಿಡಿಸಿದರೆ, ಇನ್ನುಳಿದ ರಾಜಸ್ಥಾನ ಆಟಗಾರರಿಂದ ನಿರೀಕ್ಷಿತ ರನ್ ಬರಲಿಲ್ಲ. ಯಶಸ್ವಿ ಜೈಸ್ವಾಲ್ 22 ರನ್ ಸಿಡಿಸಿ ಔಟಾದರು. ನಾಯಕ ಸಂಜು ಸ್ಯಾಮ್ಸನ್ 14 ರನ್ ಸಿಡಿಸಿ ಔಟಾದರು. ದೇವದತ್ ಪಡಿಕ್ಕಲ್ 2 ಹಾಗೂ ಶಿಮ್ರೊನ್ ಹೆಟ್ಮೆಯರ್ 11 ರನ್ ಸಿಡಿಸಿ ನಿರ್ಗಮಿಸಿದರು. ಆರ್ ಅಶ್ವಿನ್ 6, ರಿಯಾನ್ ಪರಾಗ್ 15, ಟ್ರೆಂಟ್ ಬೋಲ್ಟ್ 11, ಒಬೆಡ್ ಮೆಕೊಯ್ 8 ರನ್ ಸಿಡಿಸಿದರು. ಈ ಮೂಲಕ ರಾಜಸ್ಥಾನ ರಾಯಲ್ಸ್ 9 ವಿಕೆಟ್ ನಷ್ಟಕ್ಕೆ 130 ರನ್ ಸಿಡಿಸಿತು.

[t4b-ticker]

You May Also Like

More From Author

+ There are no comments

Add yours