ಮಂಗಳೂರು/ವೇಣೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಕುಲಶೇಖರ, ಮಂಗಳೂರು 2025-26ನೇ ಸಾಲಿನ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಘೋಷಿಸಿದೆ.

ಬೆಳ್ತಂಗಡಿ ತಾಲೂಕಿನ ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿಗೆ ಭಾಜನವಾಗಿದೆ. ಸಂಘದ ಅಧ್ಯಕ್ಷರಾದ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು ಹಾಗೂ ಕಾರ್ಯನಿರ್ವಹಣಾಧಿಕಾರಿ ರಾಜು ಪೂಜಾರಿ ಅವರು ಒಕ್ಕೂಟದಿಂದ ಪ್ರಶಸ್ತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ಮತ್ತು ಆಡಳಿತ ಮಂಡಳಿ ಸದಸ್ಯರು, ವ್ಯವಸ್ಥಾಪಕರುಗಳು ಉಪಸ್ಥಿತರಿದ್ದರು.



