ಬಂಟ್ವಾಳ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಮಚ್ಚಿನಿಂದ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಲ ನಿವಾಸಿ ಚೇತನ್ನನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ.
ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.




