ಬಾಣಂತಿಯರು ಮಕ್ಕಳು ಸೊಪ್ಪು ತರಕಾರಿ ಹಾಗೂ ಹಣ್ಣುಗಳನ್ನು ಹೆಚ್ಚಾಗಿ ಸೇವಿಸಬೇಕು: ಆರೋಗ್ಯ ಸಹಾಯಕಿ ವೀಣಾ

 

ಕೋವಿಡ್ ‌- 19 ಪರಿಸ್ಥಿತಿಯಲ್ಲಿ ಪೌಷ್ಟಿಕ ಆಹಾರ ಅಗತ್ಯ. ವಾಣಿವಿಲಾಸ ಪುರದ ಪ್ರಾಥಮಿಕ ಆರೋಗ್ಯ ಕೇಂದ್ರ ದಿಂದ ಕುರುಬರಹಳ್ಳಿ ಗ್ರಾಮದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಆರೋಗ್ಯ ಸಹಾಯಕಿ ವೀಣಾ ಗರ್ಭಿಣಿಯರಿಗೆ ಹಾಗೂ ಬಾಣಂತಿಯರು ಮಕ್ಕಳು ಸೊಪ್ಪು ತರಕಾರಿ ಹಾಗೂ ಹಣ್ಣುಗಳನ್ನು ಹೆಚ್ಚಾಗಿ ಸೇವಿಸಬೇಕು ಎಂದು ಸಲಹೆ ನೀಡಿದರು. ಹಾಗೂ ಕೋರೋನ ರೋಗವು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ವೃದ್ಧರು ಮಕ್ಕಳು ಅನಗತ್ಯವಾಗಿ ಓಡಾಡಬಾರದು ಹಾಗೂ ದಿನನಿತ್ಯ ಬಿಸಿನೀರಿನಲ್ಲಿ ನಿಂಬೆ ಹಣ್ಣಿನ ರಸವನ್ನು ಬೆರೆಸಿ ದಿನನಿತ್ಯ ಕುಡಿಯಬೇಕು ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ಸಲಹೆ ನೀಡಿದರು.ಎಲ್ಲರೂ ಕಡ್ಡಾಯವಾಗಿ ಮಾಸ್ಕನ್ನು ಧರಿಸಬೇಕು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಆಗಾಗ ಕೈಗಳನ್ನು ಸ್ವಚ್ಛವಾಗಿ ತೊಳೆಯಬೇಕು ಎಂದು ಸಲಹೆ ನೀಡಿದರು.ಈ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಇದ್ದರು.

[t4b-ticker]

You May Also Like

More From Author

+ There are no comments

Add yours