ನವದೆಹಲಿ, ಸೆ.1: ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ತೈಲ ಮಾರುಕಟ್ಟೆ ಕಂಪನಿಗಳು (OMCs) ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ಮುಟ್ಟಿಸಿವೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು ಪ್ರತಿ ಸಿಲಿಂಡರ್ಗೆ 9.50 ರೂ.ನಷ್ಟು ಹೆಚ್ಚಳ ಮಾಡಲಾಗಿದೆ. ಇದೇ ವೇಳೆ, 5 ಕೆಜಿ ಗೃಹಬಳಕೆಯೇತರ ಸಿಲಿಂಡರ್ ಬೆಲೆಯನ್ನು 2 ರೂ. ರಷ್ಟು ಹೆಚ್ಚಿಸಲಾಗಿದ್ದು , 14.2 ಕೆಜಿ ತೂಕದ ಸಾಮಾನ್ಯ ಗೃಹಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.





