ಹಲವೆಡೆ ಪೂರ್ವ ಮುಂಗಾರು ಮಳೆ ಭರ್ಜರಿಯಾಗುತ್ತಿದ್ದು, ಇದು ಈ ತಿಂಗಳು ಅಂತ್ಯ ಅಂದರೆ ಜೂನ್ 30ರ ವರೆಗೂ ಮುಂದುವರೆಯಲಿದೆ. ಹೌದು…ಜೂನ್ 3ರ ವರೆಗೂ ರಾಜ್ಯದ ವಿವಿದೆಡೆ ಗುಡುಗು, ಮಿಂಚು ಹಾಗೂ ತೀವ್ರ ವೇಗದ ಬಿರುಗಾಳಿ ಸಹಿತ ಆಲಿಕಲ್ಲು ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ (ಮೇ 27) ‘ಯೆಲ್ಲೋ (Yellow Alert) ಹಾಗೂ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
https://twitter.com/KarnatakaSNDMC/status/2059222806169284784/photo/1
ಮೇ 26 ರಿಂದ 28 ರವರೆಗೆ ಉತ್ತರ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಇನ್ನು ಮೇ 26 ರಿಂದ 30, 2026 ರವರೆಗೆ ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇ 26 ಮತ್ತು 27ರಂದು ಭಾರೀ ಮಳೆ (64.5mm – 115.5mm) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಯೆಲ್ಲೊ ಅಲರ್ಟ್ ನೀಡಿದೆ.





