ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ಸಹಾಯವಾಣಿ ಪ್ರಾರಂಭ

 

ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಫೆ.21:
ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ, ತ್ವರಿತವಾಗಿ ಸ್ಪಂದಿಸಲು ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯ ಎಲ್ಲ ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಪ್ರಾರಂಭಿಸಲಾಗಿದೆ.
2023-24ನೇ ಸಾಲಿಗೆ ಚಿತ್ರದುರ್ಗ  ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಸರ್ಕಾರ ಘೋಷಿಸಿದ್ದು, ಬರಪೀಡಿತ ತಾಲ್ಲೂಕು ವ್ಯಾಪ್ತಿಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ.
ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪನೆಗೊಂಡಿರುವ  ಸಹಾಯವಾಣಿ 08194-222538, ಚಿತ್ರದುರ್ಗ ತಾಲ್ಲೂಕು ಕಚೇರಿ 08194-222416, ಚಳ್ಳಕೆರೆ ತಾಲ್ಲೂಕು ಕಚೇರಿ 08195-250648, ಹಿರಿಯೂರು ತಾಲ್ಲೂಕು ಕಚೇರಿ 08193-263226, ಹೊಸದುರ್ಗ ತಾಲ್ಲೂಕು ಕಚೇರಿ 08199-295058, ಹೊಳಲ್ಕೆರೆ ತಾಲ್ಲೂಕು ಕಚೇರಿ 08191-200013 ಹಾಗೂ ಮೊಳಕಾಲ್ಮುರು ತಾಲ್ಲೂಕು ಕಚೇರಿ 08198-229234 ಸಹಾಯವಾಣಿ ಮೂಲಕ ತಮ್ಮ ಸಮಸ್ಯೆಗಳನ್ನು ದಾಖಲಿಸಬಹುದಾಗಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕೋರಿದ್ದಾರೆ.

ಇದನ್ನೂ ಓದಿ:  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಲ್ಲಿಸಿರುವ ಉತ್ತರಗಳು ಮತ್ತು ಬೇಡಿಕೆಗಳು

[t4b-ticker]

You May Also Like

More From Author

+ There are no comments

Add yours