ಕುಡಿಯುವ ನೀರು ಸಮಸ್ಯೆ ನಿರ್ವಹಣೆಗೆ ಸಹಾಯವಾಣಿ ಪ್ರಾರಂಭ

 

ಚಿತ್ರದುರ್ಗ  :  ಜಿಲ್ಲೆಯಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ, ತ್ವರಿತವಾಗಿ ಸ್ಪಂದಿಸುವಂತಾಗಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ 08194-222538 ಪ್ರಾರಂಭಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂಬುದಾಗಿ ಸರ್ಕಾರ ಘೋಷಿಸಿದ್ದು, ಬರಪೀಡಿತ ತಾಲ್ಲೂಕು ವ್ಯಾಪ್ತಿಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಈಗಾಗಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ.

ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ, ಸಾರ್ವಜನಿಕರು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಸಾರ್ವಜನಿಕ ಕುಂದುಕೊರತೆ ಕೋಶದಲ್ಲಿ ಸ್ಥಾಪಿಸಲಾಗಿರುವ ಸಹಾಯವಾಣಿ ಸಂಖ್ಯೆ 08194-222538 ಸಂಖ್ಯೆಗೆ ಕರೆ ಮಾಡಿ, ತಮ್ಮ ಸಮಸ್ಯೆಗಳನ್ನು ದಾಖಲಿಸಬಹುದಾಗಿದೆ.  ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಇದನ್ನೂ ಓದಿ; ವಸತಿ ಶಾಲೆ: 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

[t4b-ticker]

You May Also Like

More From Author

+ There are no comments

Add yours