ನಾಳೆ (ಮೇ 20) ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ಸಂಘಟನೆಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಸರ್ಕಾರ ಮತ್ತು ನೌಕರರ ನಡುವೆ ಚರ್ಚೆ ನಡೆಯಲಿ, ಮುಷ್ಕರ ಬೇಡ ಎಂದು ಕೋರ್ಟ್ ಮಹತ್ವದ ಆದೇಶ ನೀಡಿದೆ. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ಗೆ ಕೆಲಸದ ಮಹಿಳೆ ಮತ್ತು ಕಟ್ಟಡ ಕಾರ್ಮಿಕ ಪಿಐಎಲ್ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.