ನೀರಿನ ರಭಸಕ್ಕೆ ಸುವರ್ಣಮುಖಿ ಸೇತುವೆ ಪಿಸ್ ಪಿಸ್

 

ಸುವರ್ಣಮುಖಿ ಸೇತುವೆ ಕುಸಿತ : ತಹಶೀಲ್ದಾರ್ ಭೇಟಿ :

ಹಿರಿಯೂರು: ಸೆ., 21: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಸಮುದ್ರದಹಳ್ಳಿ ಹಾಗೂ ಮ್ಯಾದನಹೊಳೆ ಗ್ರಾಮಗಳ ಸಂಪರ್ಕ ಸೇತುವೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಜವನಗೊಂಡನಹಳ್ಳಿ ಹೋಬಳಿಯಲ್ಲಿ ಸುವರ್ಣಮುಖಿ ನದಿ ಹರಿಯುತ್ತಿದ್ದು, ಎರಡು ಗ್ರಾಮಗಳಿಗೆ ಸಂಪರ್ಕಿಸಲು ಸೇತುವೆ ನಿರ್ಮಾಣ ಮಾಡಿದ್ದರು.

ಸುವರ್ಣ ಮುಖಿ ಸೇತುವೆ ಮಂಗಳವಾರ ರಾತ್ರಿ ಕುಸಿದು ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿರುವುದಿಲ್ಲ. ಸ್ಥಳಕ್ಕೆ ತಹಶೀಲ್ದಾರ್ ಪ್ರಶಾಂತ್ ಕೆ ಪಾಟೀಲ್, ಕಂದಾಯ ಇಲಾಖೆ ಅಧಿಕಾರಿಗಳು, ವೃತ್ತ ನಿರೀಕ್ಷಕ ಕೆ.ಆರ್. ರಾಘವೇಂದ್ರ ಮತ್ತುಪೊಲೀಸ್ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಮಾರ್ಗದಲ್ಲಿ ಸಂಚರಿಸಬಾರದೆಂದು ತಹಶೀಲ್ದಾರ್ ಗ್ರಾಮಸ್ಥರಿಗೆ ಮನವಿ ಮಾಡಿದರು. ಸೇತುವೆಯ ದುರಸ್ತಿ ಕಾರ್ಯಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು ವೃತ್ತ ನಿರೀಕ್ಷಕ ಕೆ ಆರ್ ರಾಘವೇಂದ್ರ ಮಾತನಾಡಿ ಎರಡು ಹಳ್ಳಿಗಳ ಬಳಿ ಬ್ಯಾರಿಕೇಡ್ ಗಳನ್ನು ಹಾಕಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. ಅಧಿಕಾರಿ ವರ್ಗದವರು ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours