14 ವರ್ಷದ ಒಳಗಿನ ಎಲ್ಲಾ ಮಕ್ಕಳು ಶಿಕ್ಷಣ ಪಡೆಯುವುದು ಮೂಲಭೂತ ಹಕ್ಕು

 

ಹೊಳಲ್ಕೆರೆ: ಉಚ್ಛ ನ್ಯಾಯಾಲಯದ ಆದೇಶದಂತೆ ಭಾರತ ಸಂವಿಧಾನದ ಕಲಂ 21(ಎ) ಪ್ರಕಾರ 6 ರಿಂದ 14 ವರ್ಷದ ಪ್ರತಿ ಮಗು 8 ವರ್ಷಗಳ ಶಾಲಾ ಶಿಕ್ಷಣವನ್ನು ಪಡೆಯುವುದು ಮೂಲಭೂತ ಹಕ್ಕಾಗಿರುತ್ತದೆ. ಆದ್ದರಿಂದ ನಗರ ಸ್ಥಳೀಯ ಸಂಸ್ಥೆಗಳು 2020-21ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಶಾಲೆಗೆ ಹಾಜರಾಗಲು ಮತ್ತು ಶಾಲಾ ಮುಖ್ಯವಾಹಿನಿಗೆ ತರಲು ಮನೆ-ಮನೆ ಸಮೀಕ್ಷೆ ಕೈಗೊಳ್ಳಲು ಸೂಚಿಸಿರುವುದರಿಂದ ಪಟ್ಟಣ ಪಂಚಾಯಿತಿ ಕಛೇರಿ ಸಿಬ್ಬಂದಿಗಳು ಹಾಗೂ ವಾರ್ಡ್ ಬಿ.ಎಲ್.ಒ.ಗಳು ಮನೆ-ಮನೆ ಸಮೀಕ್ಷೆಗೆ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವ ಕಾರ್ಯಕ್ರಮಕ್ಕೆ ದಿನಾಂಕ:23.12.2020ರಂದು ವಾರ್ಡ್ ನಂ 01ರ ಗಣಪತಿ ದೇವಸ್ಥಾನದ ಹತ್ತಿರ ಮಾನ್ಯ ಅಧ್ಯಕ್ಷರಾದ ಶ್ರೀ ಆರ್.ಎ.ಅಶೋಕ್ರವರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾನ್ಯ ಉಪಾಧ್ಯಕ್ಷರಾದ ಶ್ರೀ ಕೆ.ಸಿ.ರಮೇಶ್ರವರು ಪಟ್ಟಣ ಪಂಚಾಯಿತಿ ಸದಸ್ಯರಾದ ಶ್ರೀಮತಿ ನಾಗರತ್ನ.ಹೆಚ್.ಆರ್.ವೇದಮೂರ್ತಿ, ಶ್ರೀ ಪಿ.ಆರ್.ಮಲ್ಲಿಕಾರ್ಜುನ, ಡಿ.ಎಸ್.ವಿಜಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಎ.ವಾಸಿಂ, ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು, ವಾರ್ಡ್ ಬಿ.ಎಲ್.ಒ ರವರು, ಹಾಗೂ ವಾರ್ಡ್ ನಂ 01 ಸಾರ್ವಜನಿಕರು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours