ಹೊಳಲ್ಕೆರೆ ಪಟ್ಟಣದಲ್ಲಿ ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ವಿಶೇಷ ಅಭಿಯಾನ – ಮುಖ್ಯಾಧಿಕಾರಿ ವಾಸಿಂ

 

 

ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವ ಸಲುವಾಗಿ ದಿನಾಂಕ:27/08/2022ರಂದು ಬೆಳಿಗ್ಗೆ 10.30 ಗಂಟೆಗೆ ಹೊಳಲ್ಕೆರೆ ತಾಲ್ಲೂಕು ತಹಶೀಲ್ದಾರ್ ರವರ ನೇತೃತ್ವದಲ್ಲಿ ವಿಶೇಷ ಆಂದೋಲವನ್ನು ಹೊಳಲ್ಕೆರೆ ಪಟ್ಟಣದಲ್ಲಿ ಹಮ್ಮಿಕೊಂಡಿದ್ದು, ಈ ವಿಶೇಷ ಅಂದೋಲನವನ್ನು ತಾಲ್ಲೂಕು ಕಛೇರಿಯಿಂದ ಪ್ರಾರಂಭಿಸಿ ಪಟ್ಟಣದ ಎಲ್ಲಾ ವಾರ್ಡ್ಗಳಲ್ಲಿ ಮುಂದುವರೆಸಲಾಗುವುದು. ಸದರಿ ಆಂದೋಲನದಲ್ಲಿ ಹೊಳಲ್ಕೆರೆ ಪುರಸಭೆಯ ಗೌರವಾನ್ವಿತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಹಾಗೂ ಸಂಘ ಸಂಸ್ಥೆಗಳು, ಸ್ವಸಹಾಯ ಸಂಘಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಮತಗಟ್ಟೆ ಮಟ್ಟದ ಅಧಿಕಾರಿಗಳು ಈ ಆಂದೋಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಹೊಳಲ್ಕೆರೆ ಪಟ್ಟಣದ ನಾಗರಿಕರು ಅಧಿಕಾರಿಗಳಿಗೆ ತಮ್ಮ ಆಧಾರ್ ಸಂಖ್ಯೆ ಹಾಗೂ ಚುನಾವಣಾ ಗುರುತಿನ ಚೀಟಿ ಮತ್ತು ತಮ್ಮ ಮೊಬೈಲ್ ಸಂಖ್ಯೆಯನ್ನು ನೀಡಿ ಚುನಾವಣಾ ಗುರುತಿನ ಸಂಖ್ಯೆಗೆ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಣೆ ಮಾಡಿಸುವಂತೆ ಹೊಳಲ್ಕೆರೆ ಪುರಸಭೆ ಮುಖ್ಯಾಧಿಕಾರಿ ಎ ವಾಸಿಂ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ವಿದ್ಯಾವಂತ, ಪ್ರಜ್ಞಾವಂತ ನಾಗರಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ವಯಂ ಸೇವಾ ಸಂಸ್ಥೆಗಳು ಸಹ ಸ್ವಯಂ ಪ್ರೇರಿತರಾಗಿ ವೋಟರ್ ಹೆಲ್ಪ್ ಲೈನ್ ತಂತ್ರಾಂಶವನ್ನು ತಮ್ಮ ಮೊಬೈಲ್ನಲ್ಲಿ ಅನುಸ್ಥಾಪಿಸಿಕೊಂಡು ಆಧಾರ್ ಹಾಗೂ ಮತದಾರರ ಗುರುತಿನ ಚೀಟಿ ಜೋಡಣೆ ಕಾರ್ಯಕ್ಕೆ ನೆರವಾಗುವಂತೆ ಸಹ ಅವರು ಕರೆ ನೀಡಿದ್ದಾರೆ.

[t4b-ticker]

You May Also Like

More From Author

+ There are no comments

Add yours