ವರಣನ ಆರ್ಭಟಕ್ಕೆ ಈ‌ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ

 

 

 

 

 ಕರ್ನಾಟಕ:  ಕಳೆದ 3-4 ದಿನಗಳಿಂದ ಸುರಿಯುತ್ತಿರಯವ ವರುಣನ ಅರ್ಭಟದ  ಕಾರಣದಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಭಾರೀ ಮಳೆಯ ಕಾರಣದಿಂದ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

 

ಚಿಕ್ಕಮಗಳೂರು ಜಿಲ್ಲೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ  ತೀವ್ರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಭಿಪ್ರಯಾದಂತೆ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ, ಕಳಸ ತಾಲೂಕು ಹಾಗೂ ಶೃಂಗೇರಿ ವ್ಯಾಪ್ತಿಯಲ್ಲಿನ ಶೈಕ್ಷಣಿಕ ವಿದ್ಯಾಸಂಸ್ಥೆಗಳಿಗೆ ( ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಂಸ್ಥೆ ) ಇಂದು ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ದಿನಾಂಕ 06-07-2022ರಿಂದ ದಿನಾಂಕ 09-07-2022ರವರೆಗೆ ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯ ಆಂಬಳೆ ಹಾಗೂ ಲಕ್ಕಾ ಹೋಬಳಿ ಹೊರತು ಪಡಿಸಿದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ ಮತ್ತು ಎನ್ ಆರ್ ಪುರ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆ

 

 

ಉತ್ತರ ಕನ್ನಡ ಜಿಲ್ಲೆಯಲ್ಲಿಯಲ್ಲಿಯೂ  ಮಳೆರಾಯ ಆರ್ಭಟಿಸುತ್ತಿರೋ ಕಾರಣ, ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿದ್ದಾರೆ.

ಉಡುಪಿ ಜಿಲ್ಲೆ

ಉಡುಪಿ ಜಿಲ್ಲೆಯಲ್ಲಿಯೂ ಮಳೆಯ ಆರ್ಭಟಕ್ಕೆ ಜನತೆ ತತ್ತರಿಸಿ ಹೋಗಿದ್ದಾರೆ. ಈ ಕಾರಣದಿಂದಾಗಿಯೇ ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕೊಡಗು ಜಿಲ್ಲೆ

ಕೊಡಗು  ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಆದೇಶಿಸಿದ್ದು, ಕೊಡಗು ಜಿಲ್ಲೆಯಾಧ್ಯಂತ ಭಾರೀ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಇಂದು ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ ಎಂದು ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವಂತ ಭಾರಿ ಮಳೆಯಿಂದಾಗಿ ಜನರು ಜಿಲ್ಲೆಯ ಅನೇಕ ತಾಲೂಕುಗಳಲ್ಲಿ ಮನೆಯಿಂದ ಹೊರ ಬರದಂತ ಪರಿಸ್ಥಿತಿ ಇದೆ. ಈ ಹಿನ್ನಲೆಯಲ್ಲಿಯೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

[t4b-ticker]

You May Also Like

More From Author

+ There are no comments

Add yours