ಹೊಸದುರ್ಗ : ಜಿಲ್ಲಾಧಿಕಾರಿಯಿಂದ ಮತಗಟ್ಟೆ ಪರಿಶೀಲನೆ

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜನವರಿ10:
ಮತದಾರರ ಅಂತಿಮ ಪಟ್ಟಿ ಪರಿಷ್ಕರಣೆ ಕಾರ್ಯ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲಾಧಿಕಾರಿ  ದಿವ್ಯಪ್ರಭು ಜಿ.ಆರ್.ಜೆ ಮಂಗಳವಾರ ಹೊಸದುರ್ಗ ತಾಲ್ಲೂಕಿನ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೊಸದುರ್ಗ ತಾಲ್ಲೂಕಿನ ಬಾಗೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಧುರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಯಾಲಕಪ್ಪನಹಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಹೊಸದುರ್ಗ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿನ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಮತಗಟ್ಟೆಗಳಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಇನ್ನೂ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ಬರಲಿದ್ದು, ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮತಗಟ್ಟೆಗಳಲ್ಲಿ ಶೌಚಾಲಯ, ನೀರು, ವಿದ್ಯುತ್, ಸ್ವಚ್ಚತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು ಎಂದು ಬಿಎಲ್‍ಒ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮತಗಟ್ಟೆಗಳಲ್ಲಿ ಏನಾದರೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಅವಶ್ಯಕತೆ ಇದ್ದರೆ ಅವುಗಳನ್ನು ಕೂಡಲೇ ಜಿಲ್ಲಾಡಳಿತದ ಗಮನಕ್ಕೆ ತಂದು ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಇದೇ ವೇಳೆ ಹೊಸದುರ್ಗ ತಾಲ್ಲೂಕು ಕಚೇರಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಹೊಸದುರ್ಗ ಗ್ರೇಡ್-2 ತಹಶೀಲ್ದಾರ್ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಇದ್ದರು.

[t4b-ticker]

You May Also Like

More From Author

+ There are no comments

Add yours