ಬಿಜೆಪಿ ಸಂಸದನ ಪುತ್ರ ಕಾಂಗ್ರೆಸ್ ಸಹ ಸದಸ್ಯನಾಗಿ ಸೇರ್ಪಡೆ.

 

ಬೆಂಗಳೂರು: ಹೊಸಕೋಟೆ ವಿಧಾನಸಭೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ನಮ್ಮ ಪಕ್ಷಕ್ಕೆ ಸಹ ಸದಸ್ಯರಾಗಿ ಕೆಲಸ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದು, ರಾಜಕೀಯ ಪಕ್ಷ ಸೇರಲು ಸಾಧ್ಯವಿಲ್ಲ ಆದ್ದರಿಂದ ಕಾಂಗ್ರೆಸ್ ಸಹ ಸದಸ್ಯರಾಗಿ ಮಾಡಿ ಕಾಂಗ್ರೆಸ್ ಎಲ್ಲಾ ರೀತಿಯಲ್ಲಿ ಹೊಸಕೋಟೆ ಶಾಸಕರ ಬೆಂಬಲಕ್ಕೆ ಕಾಂಗ್ರೆಸ್ ಇರುತ್ತದೆ ಎಂದರು.

ಶರತ್  ತಂದೆ ಬಿ.ಎನ್.ಬಚ್ಚೇಗೌಡ ಅವರು ಭಾರತೀಯ ಜನತಾ ಪಕ್ಷದ ಸಂಸದರಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ, ಬಿಜೆಪಿ ಮುಖಂಡರಾಗಿದ್ದ ಶರತ್ 2019 ರಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ  ಹಸಕೋಟೆ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರುವುದು ಇದೀಗ ಅಧಿಕೃತವಾಗಿದೆ. ಅವರು ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಸಿಎಲ್ಪಿ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸ್ಪೀಕರ್ ರಮೇಶಕುಮಾರ್,ಜಮೀರ್, ಬೈರತಿ ಸುರೇಶ್, ಕೃಷ್ಣಬೈರೇಗೌಡ, ಸಲಿಂ ಅಹಮದ್, ಎಸ್.ಆರ್.ಪಾಟೀಲ್ ಹೊಸಕೋಟೆ ಕ್ಷೇತ್ರದ ಎಲ್ಲಾ ಶರತ್ ಬೆಂಬಲಿಗ ಜನಪ್ರತಿ‌ನಿಧಿಗಳು ಇದ್ದರು..

[t4b-ticker]

You May Also Like

More From Author

+ There are no comments

Add yours