ವೇಣೂರು: ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ (ರಿ.) ಹೊಸಪಟ್ಣ ಬಜಿರೆ, ಶ್ರೀ ಸತ್ಯನಾರಾಯಣ ಸಭಾಭವನ ನಿರ್ಮಾಣ ಸಮಿತಿ, ಶ್ರೀ ಸತ್ಯನಾರಾಯಣ ಪ್ರೆಂಡ್ಸ್ ಕ್ಲಬ್, ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿಬಂಧು ಒಕ್ಕೂಟ ಬಜರೆ ಬಿ ಇವುಗಳ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 44ನೇವರ್ಷದ ಮೊಸರುಕುಡಿಕೆ ಉತ್ಸವವು ಹೊಸಪಟ್ಣ ಶ್ರೀ ಸತ್ಯನಾರಾಯಣ ರಂಗಮಂದಿರದ ವಠಾರದಲ್ಲಿ ಸೆ. 5ರಂದು ಜರಗಲಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 9-30 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಸುಳ್ಯದ ಉದ್ಯಮಿ ಲೋಕೇಶ್ ಪೂಜಾರಿ ಕೋರ್ಲೋಡಿ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ವೇಣೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದು, ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಕ್ಕಳು, ಪುರುಷರು, ಮಹಿಳೆಯರಿಗೂ ವಿಶೇಷ ಆಟೋಪ ಸ್ಪರ್ಧೆಗಳು ನಡೆಯಲಿದೆ.





