ಪರಮಾತ್ಮೆ ಪಂಜುರ್ಲಿ ಐತಿಹಾಸಿಕ ತುಳು ನಾಟಕ ಪ್ರದರ್ಶನ
ವೇಣೂರು: ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ಹೊಸಪಟ್ಣ-ಬಜಿರೆ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ಫ್ರೆಂಡ್ಸ್ ಕ್ಲಬ್, ಶ್ರೀ ಸತ್ಯನಾರಾಯಣ ಭಜನ ಮಂಡಳಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಪ್ರಗತಿಬಂಧು ಒಕ್ಕೂಟ ಬಜಿರೆ ಬಿ. ಇವರ ಸಂಯುಕ್ತ ಆಶ್ರಯದಲ್ಲಿ 47ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಮಾ. 14ರಂದು ಸಂಜೆ 4-30ರಿಂದ ನಡೆಯಲಿದೆ.
ಅಂದು ಸಂಜೆ 4-30ಕ್ಕೆ ಪೂಜೆ ಆರಂಭವಾಗಲಿದ್ದು, ರಾತ್ರಿ7-00 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಬಳಿಕ ಮಹಾ ಅನ್ನಸಂತರ್ಪಣೆ ನಡೆಯಲಿದ್ದು, ರಾತ್ರಿ 7-30ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8-00 ಗಂಟೆಗೆ ಧಾರ್ಮಿಕ ಸಭೆ ನಡೆಯಲಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಅಧ್ಯಕ್ಷತೆ ವಹಿಸಲಿದ್ದು, ಹಲವು ಅತಿಥಿ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.
ರಾತ್ರಿ 9-30ರಿಂದ ರಾಜ್ಯ ಪ್ರಶಸ್ತಿ ಪುರಸ್ಕೃತ ಕಲಾಕುಂಭ ಕುಳಾಯಿ ಅವರಿಂದ ಪರಮಾತ್ಮೆ ಪಂಜುರ್ಲಿ ಎಂಬ ಐತಿಹಾಸಿಕ ತುಳು ನಾಟಕ ನಡೆಯಲಿದೆ.





