ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾದ ಬೆನ್ನಲ್ಲೇ, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿಗಳನ್ನು ಪ್ರಮುಖ ಹುದ್ದೆಗಳಿಗೆ ದಿಢೀರ್ ವರ್ಗಾವಣೆ ಮಾಡಿದೆ. ಇದೇ ವೇಳೆ, ಮುಖ್ಯಮಂತ್ರಿಗಳ ಕಾರ್ಯಾಲಯಕ್ಕೂ ದಕ್ಷ ಅಧಿಕಾರಿಗಳನ್ನು ನಿಯೋಜಿಸುವ ಪ್ರಕ್ರಿಯೆ ಬಿರುಸುಗೊಂಡಿದೆ. ಇದರ ಭಾಗವಾಗಿ, ಹಿರಿಯ ಐಎಎಸ್ ಅಧಿಕಾರಿ ರಾಜೇಂದ್ರ ಚೋಳನ್ ಅವರನ್ನು ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರ್ಯದರ್ಶಿಯಾಗಿ ನೇಮಕ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಮೂಲತಃ ತಮಿಳುನಾಡಿನ ಮಧುರೈ ಜಿಲ್ಲೆಯ ಅಳಗಪ್ಪನ್ಪಟ್ಟಿ ಗ್ರಾಮದವರಾದ ರಾಜೇಂದ್ರ ಚೋಳನ್ ಅವರು ಆಡಳಿತದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ಅವರು 2008ನೇ ಸಾಲಿನ ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿ, ರಾಷ್ಟ್ರಮಟ್ಟದಲ್ಲಿ 31ನೇ ರ್ಯಾಂಕ್ ಗಳಿಸಿದ್ದರು. ಹಾಗಾಗಿ ಅವರು ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿ, ರಾಜ್ಯದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.





