ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಅನಧಿಕೃತ ವ್ಯಕ್ತಿಗಳ ಬ್ರೇಕ್ ಹಾಕಲು ನೌಕರರಿಗೆ ಗುರುತಿನ ಚೀಟಿ ಕಡ್ಡಾಯ: ಸಚಿವ ಆರ್.ಅಶೋಕ್

 

ಬೆಂಗಳೂರು : ರಾಜ್ಯದ ಉಪ ನೋಂದಣಾಧಿಕಾರಿ ಕಚೇರಿಗಳ ನೌಕರರಿಗೆ ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಿ ನೋಂದಣಿ ಮಹಾನಿರೀಕ್ಷಕರು ಮತ್ತು ಮುದ್ರಾಂಕ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ’ ಎಂದು ತಿಳಿಸಿದ್ದಾರೆ.

‘ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿನ ನ್ಯೂನತೆಗಳ ಬಗ್ಗೆ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಿದ್ದಾರೆ. ಅನಧಿಕೃತ ವ್ಯಕ್ತಿಗಳನ್ನು ಕಚೇರಿಗಳಿಂದ ಹೊರಗಿಡಲು ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ, ನಗದು ಘೋಷಣೆ ಮತ್ತು ಕಚೇರಿಯಿಂದ ಹೊರಬರುವಾಗ ಅಧಿಕಾರಿಗಳು ಮತ್ತು ಸಿಬ್ಬಂದಿಯ ಚಲನವಲನಗಳನ್ನು ದಾಖಲಿಸುವ ಬಗ್ಗೆ ನಿರ್ದೇಶನಗಳನ್ನು ನೀಡಲಾಗಿದೆ’ ಎಂದು ಅಶೋಕ ತಿಳಿಸಿದ್ದಾರೆ..

[t4b-ticker]

You May Also Like

More From Author

+ There are no comments

Add yours