ಬಾಲಕರನ್ನು ಕೆಲಸಕ್ಕೆ ಬಳಸಿಕೊಂಡರೆ ಹುಷರ್,ಓರ್ವ ಬಾಲಕನ ರಕ್ಷಣೆ

 

 

 

 

ಚಿತ್ರದುರ್ಗ:,ಪಾನ್-ಇಂಡಿಯಾ ರೆಸ್ಕ್ಯೂ ಅಂಡ್ ರಿಹ್ಯಾಬಿಲಿಟೇಶನ್ ಕ್ಯಾಂಪೈನ್ ಆಫ್ ಚೈಲ್ಡ್ ಅಂಡ್ ಅಡೋಲ್ಸೆಂಟ್ ರಕ್ಷಣಾ ಕಾರ್ಯಾಚರಣೆ ಪ್ರಯುಕ್ತ ಬುಧವಾರ ಚಿತ್ರದುರ್ಗ ತಾಲ್ಲೂಕಿನ ಕುಂಚಿಗನಾಳ್  (Kunchiganal) ಗ್ರಾಮ ವ್ಯಾಪ್ತಿಯಲ್ಲಿ ಹೊಸ ಕಟ್ಟಡ ನಿರ್ಮಾಣ ಹಂತದಲ್ಲಿ ಕೆಲಸ ಮಾಡುತ್ತಿದ್ದ ಓರ್ವ ಬಾಲಕಾರ್ಮಿಕನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಪಡಿಸಲಾಯಿತು.

 

 

ಬಾಲಕಾರ್ಮಿಕರನ್ನು ಕೆಲಸಕ್ಕೆ ಸೇರಿಸಿಕೊಳ್ಳದಂತೆ ಕಾರ್ಮಿಕರಿಗೆ ಹಾಗೂ ಸೈಟ್ ಇಂಜಿನಿಯರ್ ಅವರಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಎಚ್ಚರಿಕೆ ನೀಡಿದರು.
ಕಟ್ಟಡ ನಿರ್ಮಾಣ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆ ಆಲಿಸಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಅವರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರಿಗೆ ನೋಂದಣಿ ಕಾರ್ಡ್ ನೀಡುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಬೆಳೆವಿಮೆ ಪರಿಹಾರ ವಿತರಣೆ ಅವ್ಯವಹಾರ :ಶಾಸಕ ಟಿ.ರಘುಮೂರ್ತಿ ಪ್ರಶ್ನೆ
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ಕಾರ್ಮಿಕ ನಿರೀಕ್ಷಕ ಡಿ.ರಾಜಣ್ಣ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್ ಇದ್ದರು.

[t4b-ticker]

You May Also Like

More From Author

+ There are no comments

Add yours