ದೆಹಲಿ: ನೀಟ್ ಪರೀಕ್ಷೆ (NEET Exam) ಅಕ್ರಮ ದೇಶಾದ್ಯಂತ ಸಂಚಲನಕ್ಕೆ ಕಾರಣವಾಗಿದೆ. ದೆಹಲಿಯ ಜಂತರ್ ಮಂತರ್ನಲ್ಲಿ (Jantar Mantar) ಪ್ರಶ್ನೆ ಪತ್ರಿಕೆ ಸೋರಿಕೆ (Question Paper Leak) ಖಂಡಿಸಿ ಸಿಜೆಪಿ ಪಾರ್ಟಿಯ (CJP) ಪ್ರತಿಭಟನೆ ಮುಂದುವರಿದಿದೆ. ಅಲ್ಲದೇ ವಿಪಕ್ಷಗಳು ಸಹ ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದಾವೆ. ಸದ್ಯ, ಪರಿಸ್ಥಿತಿ ಹೀಗಿರುವಾಗಲೇ ಸೋನಮ್ ವಾಂಗ್ಚುಕ್ (Sonam Wangchuk) ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಈ ಒಂದು ಬೇಡಿಕೆಯನ್ನು ಈಡೇರಿಸಿದರೆ ಉಪವಾಸ ಸತ್ಯಾಗ್ರಹವನ್ನು ಕೈಬಿಡುತ್ತೇನೆ ಎಂದು ಹೇಳಿದ್ದಾರೆ.

ಸೋನಂ ವಾಂಗ್ಚುಕ್ ಬೇಡಿಕೆ ಏನು?
ಪರಿಸರ ಕಾರ್ಯಕರ್ತೆ ಸೋನಮ್ ವಾಂಗ್ಚುಕ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಪ್ರಕರಣಗಳನ್ನು ದಾಖಲಿಸುವುದಿಲ್ಲ ಎಂದು ಸರ್ಕಾರ ಸ್ಪಷ್ಟ ಭರವಸೆ ನೀಡಿದರೆ ಮಾತ್ರ ನಾನು ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುತ್ತೇನೆ ಎಂದು ಹೇಳಿದ್ದಾರೆ. ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಉದ್ದೇಶಿಸಿ ಅವರು ಈ ಪತ್ರವನ್ನು ಬರೆದಿದ್ದು, ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ.



