ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಿ:ಹೆಚ್ಡಿಕೆ

 

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಆವರನ್ನು ಏಕವಚನದಲ್ಲಿ (ಆ ಪದವನ್ನು ಬರೆಯಲಾರೆ) ತುಚ್ಛವಾಗಿ ಸಂಬೋಧಿಸಿದ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಡೋಂಗಿ ಪ್ರಜಾಪ್ರಭುತ್ವವಾದಿಯ ಅಸಲಿ ಮುಖ ಕಳಚಿಬಿದ್ದಿದೆ.

ಒಂದು ಕ್ಷಣವೂ ಮುಖ್ಯಮಂತ್ರಿ ಪದವಿಯಲ್ಲಿ ಇರಲು ಅವರು ಅರ್ಹರಲ್ಲ. ಕೂಡಲೇ ತಾವೆಸಗಿರುವ ಅಪಚಾರಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ರಾಜ್ಯಪಾಲರೇ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕಿತ್ತೆಸೆಯಬೇಕು ಎಂದು ಒತ್ತಾಯಿಸಿದ್ದಾರೆ.

ಶೋಷಿತ ಬುಡಕಟ್ಟು ಸಮುದಾಯದಿಂದ ಬಂದ ದೇಶದ ಮೊತ್ತ ಮೊದಲ ರಾಷ್ಟ್ರಪತಿಗಳು, ಅದರಲ್ಲಿಯೂ ಮಹಿಳೆ. ಶೋಷಿತರ ಜಾಗೃತಿ ಸಮಾವೇಶದಲ್ಲೇ ಅವರಿಗೆ ಮುಖ್ಯಮಂತ್ರಿ ಅಪಮಾನ ಎಸಗಿದ್ದಾರೆ. ಸಾರ್ವಜನಿಕ ವೇದಿಕೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿಯೊಬ್ಬರು ಸಂಬೋಧಿಸುವ ರೀತಿಯೇ ಇದು. ಸಿದ್ದರಾಮಯ್ಯ ಅವರ ನಡವಳಿಕೆ ಕರ್ನಾಟಕಕ್ಕೆ ಅಂಟಿದ ಅಳಿಸಲಾಗದ ಕಳಂಕ. ಅವರ ಈ ಕೀಳುಮಾತು ದೇಶಕ್ಕೆ, ಸಂವಿಧಾನಕ್ಕೆ ಆಗಿರುವ ಘೋರ ಅಪಚಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ:ಸಿಎಂ ಸಿದ್ದರಾಮಯ್ಯ ಕರೆ

ಚಾಮರಾಜನಗರದಲ್ಲಿ ಸಿದ್ದರಾಮಯ್ಯ ಅವರ ಸುಪುತ್ರ ಯತೀಂದ್ರ ಭಾಷಣ ಮಾಡುತ್ತಿದ್ದಾಗ ಯಾರೋ ಒಬ್ಬರು ಏಕವಚನದಲ್ಲಿ ಪ್ರಶ್ನಿಸಿದರೆಂಬ ಕಾರಣಕ್ಕೆ ಪೊಲೀಸರು ಆತನನ್ನು ಅಟ್ಟಾಡಿಸಿಕೊಂಡು ಹೋಗಿ ಬಂಧಿಸಿ ದರದರನೇ ಎಳೆದುಕೊಂಡು ಹೋದರು. ಹಾಗಿದ್ದರೆ, ರಾಷ್ಟ್ರಪತಿಗಳನ್ನೇ ಏಕವಚನದಲ್ಲಿ ಸಂಬೋಧಿಸಿದ ಈ ಮುಖ್ಯಮಂತ್ರಿಗೇನು ಶಿಕ್ಷೆ?ಎಂದು ಪ್ರಶ್ನಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours