ಎಐಸಿಸಿ ಯಿಂದ 10 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ

 

ನವದೆಹಲಿ: ಎಐಸಿಸಿ ಕೇಂದ್ರ ಕಚೇರಿಯಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಮಹತ್ವದ ಸುದ್ದಿಗೋಷ್ಠಿಯನ್ನು ನಡೆಸಲಾಗುತ್ತಿದೆ. ಈ ಸುದ್ದಿಗೋಷ್ಠಿಯಲ್ಲೇ ಕರ್ನಾಟಕದ ಮುಖ್ಯಮಂತ್ರಿಯ ಹೆಸರು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.

ಈಗಾಗಲೇ ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ 2ನೇ ಬಾರಿಗೆ, ಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂಬುದಾಗಿ ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಇದಲ್ಲದೇ ಇಂದು ಸಂಜೆ 7ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕೂಡ ಬೆಂಗಳೂರಿನಲ್ಲಿ ಕರೆಯಲಾಗಿದೆ. ಈ ಸಿಎಲ್ ಪಿ ಸಭೆಗೂ ಮುನ್ನವೇ ಇಂದು ಬೆಳಿಗ್ಗೆ 10ಕ್ಕೆ ಎಐಸಿಸಿಯಿಂದ ಮಹತ್ವದ ಸುದ್ದಿಗೋಷ್ಠಿಯನ್ನು ಕರೆಯಲಾಗಿದ್ದು, ಈ ಪ್ರೆಸ್ ಮೀಟ್ ನಲ್ಲಿ ಕರ್ನಾಟಕದ ಸಿಎಂ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಬಳಿಕ ಸಿಎಲ್ ಪಿ ಸಭೆಯಲ್ಲಿ ನಾಯಕನ ಆಯ್ಕೆ ನಡೆಯಲಿದೆ ಎದು ಹೇಳಲಾಗುತ್ತಿದೆ.

[t4b-ticker]

You May Also Like

More From Author

+ There are no comments

Add yours