ಕ್ರೀಡೆಯಲ್ಲಿ ಸೋಲು, ಗೆಲುವು ಸಹಜ. ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಸ್ವರ್ಧೆ ಮಾಡಿ: ಶಾಸಕ ಟಿ.ರಘುಮೂರ್ತಿ

 

ತುರುವನೂರು: ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ
ಚಿತ್ರದುರ್ಗ ( ಕರ್ನಾಟಕ ವಾರ್ತೆ ) ಜುಲೈ 28:
ಚಿತ್ರದುರ್ಗ ತಾಲ್ಲೂಕಿನ ತುರುವನೂರಿನ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ದಲ್ಲಿ ಆಯೋಜಿಸಿದ್ದ ತುರುವನೂರು ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿ ಗುರುವಾರ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ  ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು, ಗೆಲುವು ಸಹಜ. ಸೋಲು-ಗೆಲುವಿನ ಬಗ್ಗೆ ಚಿಂತಿಸಿದೆ, ಸ್ಪರ್ಧಾತ್ಮಕ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬುರೆಡ್ಡಿ , ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಯ್ಯ  ಗ್ರಾಮ ಪಂಚಾಯತಿ ಅಧ್ಯಕ್ಷ ಬಸವರಾಜ್,  ಸದಸ್ಯರಾದ ಡಿ.ಆರ್ ಮಂಜುನಾಥ್, ರವಿಶಂಕರ್ ರೆಡ್ಡಿ, ಸಂತೋಷ, ಮುಖ್ಯ ಶಿಕ್ಷಕಿ ಕಿರಣಮಯಿ, ಮುಖಂಡರಾದ ನಾಗರಾಜಪ್ಪ, ವಿವೇಕಾನಂದ, ಸುಭಾμï ರೆಡ್ಡಿ , ಶ್ರೀಧರ್, ಕಾಕಿ ಹನುಮಂತರೆಡ್ಡಿ , ಎಸ್‍ಡಿಎಂಸಿ ಅಧ್ಯಕ್ಷರಾದ ರಾಮ ಮೋಹನ್ ಇದ್ದರು.

[t4b-ticker]

You May Also Like

More From Author

+ There are no comments

Add yours