ವಾಲ್ಮೀಕಿ ವಿರಚಿತ ರಾಮಾಯಣದಲ್ಲಿ ಒಳಿತು ಕೆಡಕುಗಳ ದರ್ಶನವಿದೆ: ಡಿಸಿ ಕವಿತಾ ಎಸ್.ಮನ್ನಿಕೇರಿ

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಅಕ್ಟೋಬರ್09:
ವಾಲ್ಮೀಕಿ ಅತ್ಯುನ್ನತ ಸಾಧನೆ ಮಾಡಿ ದೇವಾನುದೇವತೆಗಳಿಂದ ಮಹರ್ಷಿ ಎಂಬ ಬಿರುದನ್ನು ಪಡೆದಿದ್ದಾರೆ. ಇವರು ಬರೆದ ರಾಮಾಯಣದಲ್ಲಿ ಒಳಿತು ಕೆಡಕುಗಳ ದರ್ಶನವಿದೆ. ಆದರ್ಶ ಹಾಗೂ ಕೆಟ್ಟ ಪಾತ್ರಗಳ ಚಿತ್ರಣವಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.

 

 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಭಾರತದಲ್ಲಿ ರಾಮ ಇಂದಿಗೂ ಆರಾಧ್ಯ ದೈವ. ರಾಮನ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು. ವಾಲ್ಮೀಕಿ ರಾಮಾಯಣದ ಮೂಲಕ ಜೀವನದಲ್ಲಿ ನಾವು ನಡೆಯಬೇಕಾದ ಮಾರ್ಗವನ್ನು ತೋರಿಸಿಕೊಟ್ಟಿದ್ದಾರೆ. ಈ ಮಾರ್ಗದಲ್ಲಿ ನಾವು ನಡೆಯಬೇಕು ಎಂದು ಹೇಳಿದರು.
ಮೊಳಕಾಲ್ಮರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಎಸ್.ಕೆ.ಯೋಗಾನಂದ ಉಪನ್ಯಾಸ ನೀಡಿ,  ಕ್ರಿ.ಪೂ 900ರ ಕಾಲದಲ್ಲಿಯೇ ಮಹರ್ಷಿ ವಾಲ್ಮೀಕಿಯು ರಾಮಾಯಣದ ಮೂಲಕ ಜಗತ್ತಿಗೆ ರಾಮರಾಜ್ಯ ಹಾಗೂ ಆದರ್ಶ ರಾಜ್ಯದ ಪರಿಕಲ್ಪನೆಯನ್ನು  ಕಟ್ಟಿಕೊಟ್ಟಿದ್ದಾರೆ. ರಾಮಾಯಣದಲ್ಲಿ ಬರುವ ಪಾತ್ರಗಳು ತುಂಬಾ ಬಹುಮುಖ್ಯವಾಗಿದೆ ಎಂದು ಹೇಳಿದರು.
ವಾಲ್ಮೀಕಿ ರಚಿಸಿದ ರಾಮಾಯಣದಲ್ಲಿ ಶಿಕ್ಷಣ, ನೈತಿಕ ನಿಯಮ, ರಾಜಕೀಯ ಸೇರಿದಂತೆ ಎಲ್ಲ ವಿಷಯಗಳನ್ನು ರಾಮಾಯಣ ಒಳಗೊಂಡಿದೆ ಎಂದು ಅಭಿಪ್ರಾಯಪಟ್ಟರು.
ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ ಮಾತನಾಡಿ, ರಾಜ್ಯನೀತಿ, ಶಿಕ್ಷಣದ ಮಹತ್ವ, ವೈಚಾರಿಕಾ ಚಿಂತನೆಗಳು, ಸಮಸಮಾಜದ ನಿರ್ಮಾಣ, ಮಹಿಳೆಯರ ರಕ್ಷಣೆ, ಪ್ರಾಣಿ-ಪಕ್ಷಿಗಳ ಸಂಕುಲ, ಅರಣ್ಯ ಸಂಪತ್ತಿನ ರಕ್ಷಣೆ ಬಗ್ಗೆ ಇಡೀ ಜಗತ್ತಿಗೆ ಮಾರ್ಗದರ್ಶನ ಮಾಡಿದ ಪ್ರಥಮ ಸಂತ ಮಹರ್ಷಿ ವಾಲ್ಮೀಕಿ ಎಂದು ಹೇಳಿದರು.
ಶೋಷಿತ, ಅಸಂಘಟಿತ ಸಮುದಾಯವನ್ನು ಸಂಘಟನೆ ಮಾಡುವ ದೃಷ್ಠಿಯಿಂದ ಸರ್ಕಾರದ ವತಿಯಿಂದ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಆಚರಿಸುತ್ತಿದೆ. ವಾಲ್ಮೀಕಿ ಒಬ್ಬ ದಾರ್ಶನಿಕ, ಸಂತ, ಚಿಂತಕ, ಮಹಿಳೆಯ ರಕ್ಷಣೆಗೆ ವಿಶೇಷ ಆದ್ಯತೆ ಕೊಟ್ಟ ಮಹಾನ್ ಕವಿ ವಾಲ್ಮೀಕಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಅವರ ಸ್ಮರಣಾರ್ಥ ಜಿಲ್ಲೆಯಲ್ಲಿ 2021-22 ಸಾಲಿನಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ಅಂಕಗಳಿಗೆ 625 ಅಂಕಗಳಿಸಿದ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಕುಮಾರಿ ಸೃಷ್ಠಿ.ವಿ.ಆರ್.  ಅವರಿಗೆ ಒಂದು ಲಕ್ಷ ರೂಪಾಯಿಗಳ ನಗದು ಬಹುಮಾನ ನೀಡಿ ಅಭಿನಂದಿಸಲಾಯಿತು. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಮಾರಿಕಾಂಬ ಸ್ತ್ರೀ ಶಕ್ತಿ ಸ್ವ-ಸಹಾಯ ಮಹಿಳಾ ಸಂಘಕ್ಕೆ ರೂ.2.50 ಲಕ್ಷ ಧನ ಸಹಾಯದ ಚೆಕ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಂಜುನಾಥ್ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಟಿ.ಹೆಚ್.ನಾಗೇಂದ್ರನಾಯ್ಕ್, ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕಿ ಟಿ.ಎನ್.ಮಂಜುಳಾ, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎ.ಪರಮೇಶ್ವರಪ್ಪ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

[t4b-ticker]

You May Also Like

More From Author

+ There are no comments

Add yours