ಸೆ.26ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನೆ

 

ಸೆ.26ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ವಿಶೇಷ ಚೇತನ ಮಕ್ಕಳ ಮೇಲಾಟಗಳ ಕ್ರೀಡಾಕೂಟ ಉದ್ಘಾಟನಾ ಸಮಾರಂಭ
********
ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.22:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ 14, 17 ವರ್ಷ ವಯೋಮಿತಿಯೊಳಗಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ, ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ವಿಶೇಷ ಚೇತನ ಮಕ್ಕಳ ಮೇಲಾಟಗಳ ಕ್ರಿಡಾಕೂಟ ಉದ್ಘಾಟನಾ ಸಮಾರಂಭವನ್ನು ಇದೇ ಸೆಪ್ಟೆಂಬರ್ 26ರಂದು ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಇದನ್ನು ಓದಿ: ಅಕ್ಟೋಬರ್ 13 ರಂದು ಡಿಜೆ ಮೆರವಣಿಗೆಯೊಂದಿಗೆ ಮದಕರಿ ಉತ್ಸವ:ಬಿ.ಕಾಂತರಾಜ್

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಘನ ಉಪಸ್ಥಿತಿ ವಹಿಸುವವರು. ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಕ್ರೀಡಾಕೂಟ ಉದ್ಘಾಟಿಸುವರು. ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಬಿ.ಜಿ. ಗೋವಿಂದಪ್ಪ, ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ,  ಎನ್.ವೈ.ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ ನಾರಾಯಣಸ್ವಾಮಿ, ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‍ಜೆ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಧರ್ಮೇಂದರ್ ಕುಮಾರ್ ಮೀನಾ, ಸಿ.ಟಿ.ಇ ಪ್ರಾಂಶುಪಾಲರು ಹಾಗೂ ಪದನಿಮಿತ್ತ ಸಹ ನಿರ್ದೇಶಕಿ ಟಿ.ಜಿ. ಲೀಲಾವತಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಘಟಕದ ಅಧ್ಯಕ್ಷ ಕೆ.ಟಿ. ತಿಮ್ಮಾರೆಡ್ಡಿ ಸೇರಿದಂತೆ ಗೌರವಾನ್ವಿತ ನಗರಸಭಾ ಸರ್ವ ಸದಸ್ಯರು ಭಾಗವಹಿಸುವರು.
ಜಿಲ್ಲಾ ಮಟ್ಟದ ಶಾಲಾ ಮಕ್ಕಳ ಪಂದ್ಯಾವಳಿ ನಡೆಯುವ ಸ್ಥಳಗಳ ವಿವರ:  ಜಿಲ್ಲಾ ಮಟ್ಟದ ಶಾಲಾ ಮಕ್ಕಳ ಪಂದ್ಯಾವಳಿಗಳು ಇದೇ ಸೆಪ್ಟೆಂಬರ್ 26 ಮತ್ತು 27 ರಂದು ಚಿತ್ರದುರ್ಗ ನಗರದ ವಿವಿಧ ಕ್ರೀಡಾಂಗಣಗಳಲ್ಲಿ ನಡೆಯಲಿದೆ. ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಸೆ.26ರಂದು ಬೆಳಿಗ್ಗೆ 10ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇದನ್ನು ಓದಿ: ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಹುದ್ದೆಗೆ ಅರ್ಜಿ ಆಹ್ವಾ‌ನ

ಸೆ.26ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡೆ ನಡೆಯಲಿದೆ. ಸೆ.27 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ (ವಿಶೇಷ ಚೇತನ ಮಕ್ಕಳ) ಕ್ರೀಡಾಕೂಟ, ಸರ್ಕಾರಿ ಕಲಾ ಕಾಲೇಜು ಮೈದಾನದಲ್ಲಿ ಥ್ರೋಬಾಲ್ ಮತ್ತು ಬಾಲ್‍ಬ್ಯಾಡ್ಮಿಟನ್, ಹಳೇ ಮಾದ್ಯಮಿಕ ಶಾಲಾ ಮೈದಾನದಲ್ಲಿ ಕಬಡ್ಡಿ ಮತ್ತು ಖೋಖೋ (ಪ್ರಾಥಮಿಕ ಶಾಲೆ ವಿಭಾಗ), ಮಹಾರಾಣಿ ಪ್ರೌಢಶಾಲೆ ಕೋಟೆ ಎದುರು ಖೋಖೋ (ಪ್ರೌಢಶಾಲೆ ವಿಭಾಗ ಬಾಲಕಿಯರು), ಜೋಗಿಮಟ್ಟಿ ರಸ್ತೆಯ ಶ್ರೀ ವಾಸುದೇವ ರೆಡ್ಡಿ ಸ್ಮಾರಕ ಪ್ರೌಢಶಾಲೆಯಲ್ಲಿ ಖೋಖೋ (ಬಾಲಕರ ಪ್ರೌಢಶಾಲೆ ವಿಭಾಗ) ಕ್ರೀಡೆಗಳು ನಡೆಯಲಿವೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours