ಮರುಘಾ ಮಠದ ನೂತನ ಪೀಠಾಧ್ಯಕ್ಷರ ನೇಮಕಕ್ಕೆ ಲಿಂಗಾಯತ ಮುಖಂಡರ ನಿಯೋಗ ಸಿಎಂ ಭೇಟಿ

 

 

 

 

ಚಿತ್ರದುರ್ಗ🙁chitrdaurga) ಹೈ ಸ್ಕೂಲ್ ನ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಡಾ. ಶಿವಮೂರ್ತಿ ಮುರುಘಾ ಶರಣರು ಬಂಧನದಲ್ಲಿರುವುದರಿಂದ ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ನೂತನ ಪೀಠಾಧ್ಯಕ್ಷರ ನೇಮಕಕ್ಕೆ ಮುಂದಾಗಬೇಕು ಎಂದು ವೀರಶೈವ ಲಿಂಗಾಯತ ಸಮಾಜದ ಮುಖಂಡರ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಯಡಿಯೂರಪ್ಪ  ಅವರಿಗೆ ಮನವಿ ಮಾಡಿದೆ.muruga mata

ಮಾಜಿ ಸಚಿವ ಎಚ್‌.ಏಕಾಂತಯ್ಯ, ವಿಧಾನಪರಿಷತ್‌ ಸದಸ್ಯ ಕೆ.ಎಸ್‌.ನವೀನ್ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಜನರ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ ಮಾಡಿದೆ. ಶಾಸಕ ಬಿ.ಎಸ್.ಯಡಿಯೂರಪ್ಪ ಅವರೊಂದಿಗೂ ಚರ್ಚಿಸಿದೆ.chitrdaurga

 

 

ಶಿವಮೂರ್ತಿ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವುದರಿಂದ ಮುರುಘಾ ಮಠದ ದೈನಂದಿನ ಧಾರ್ಮಿಕ ಕಾರ್ಯಗಳಿಗೆ  ಹಾಗೂ ಆಡಳಿತಾತ್ಮಕ ಚಟುವಟಿಕೆಗೆ ತೊಂದರೆ ಆಗುತ್ತಿದೆ. ಮುರುಘಾ ರಾಜೇಂದ್ರ ಪೀಠದ ಉಳಿವಿಗೆ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಮುರುಘಾ ಮಠಕ್ಕೆ ಹೊಸ ಪೀಠಾಧ್ಯಕ್ಷರ ನೇಮಕ ಮಾಡಬೇಕು ಎಂಬ ಮನವಿ ಮಾಡಲಾಗಿದೆ ಎಂದು ಸಮುದಾಯದ ಮುಖಂಡ ಎಸ್‌.ಷಣ್ಮುಖಪ್ಪ ಮಾಹಿತಿ ನೀಡಿದ್ದಾರೆ.

ಕೇಲವು ದಿನಗಳ ಹಿಂದೆ ಸಹ ಇದೇ ಟೀಂ ಮುರುಘಾ ಶರಣರು ಬದಲಿಗೆ ಹೊಸದಾಗಿ ಪೀಠಾಧ್ಯಕ್ಷರ ನೇಮಕ ಮಾಡಿ ಎಂದು ಸರ್ಕಾರಕ್ಕೆ ಒತ್ತಾಯಿಸಿತ್ತು ಆದರೆ ಈಗ ಮತ್ತೊಮ್ಮೆ   ಖುದ್ದು ಚರ್ಚೆ ಮಾಡಿದ್ದು ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ.

ಇದರ ಜೊತೆಗೆ ಹೊಸದುರ್ಗದ ಲಿಂಗಮೂರ್ತಿ ಸಹ ಭಕ್ತರಿಗೆ ನೋವಾಗದಂತೆ ನಡೆದುಕೊಳ್ಳಬೇಕು. ಎಲ್ಲಾರ ಮನಸ್ಸಿಗೆ ಘಾಸಿ ಆಗಿದೆ ಎಂದು ಹೇಳಿರುವುದು ಸಹ ಬದಲಾವಣೆ ಮುನ್ಸೂಚನೆ ಆಗಿದೆ  ಎಂದು ಹೇಳಬಹುದು.

[t4b-ticker]

You May Also Like

More From Author

+ There are no comments

Add yours