ಕನೌಜ್ (ಉತ್ತರ ಪ್ರದೇಶ) : ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಸರ್ಕಾರಿ ಶಾಲೆಯ ಕ್ಲಾಸ್ರೂಮ್ನಲ್ಲಿ ಶಿಕ್ಷಕ-ಶಿಕ್ಷಕಿ ಅಸಭ್ಯ ವರ್ತನೆ ಮಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷಣ ಇಲಾಖೆ ತನಿಖೆಗೆ ಆದೇಶಿಸಿದ್ದು, ಆರೋಪ ಸಾಬೀತಾದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ಕನೌಜ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ತರಗತಿ ನಡೆಯದ ಸಮಯದಲ್ಲಿ ಶಿಕ್ಷಕ ಮತ್ತು ಶಿಕ್ಷಕಿ ತರಗತಿ ಕೊಠಡಿಯಲ್ಲೇ ಅನುಚಿತವಾಗಿ ವರ್ತಿಸುತ್ತಿರುವ ದೃಶ್ಯವಿದೆ ಎಂದು ಹೇಳಲಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋ ವೈರಲ್ ಆದ ಬಳಿಕ ಈ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಮಾಹಿತಿಗಳ ಪ್ರಕಾರ, ಈ ದೃಶ್ಯಗಳನ್ನು ಸ್ಥಳೀಯರೊಬ್ಬರು ರಹಸ್ಯವಾಗಿ ತಮ್ಮ ಮೊಬೈಲ್ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಕೆಲವೇ ಗಂಟೆಗಳಲ್ಲಿ ವಿಡಿಯೋ ವಿವಿಧ ವೇದಿಕೆಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಸಾರ್ವಜನಿಕರ ಗಮನ ಸೆಳೆದಿದೆ.



