ಗೋಶಾಲೆ ಪ್ರಾರಂಭಕ್ಕೆ ಸಿದ್ಧತೆಗೆ ಸೂಚನೆ: ಟಿ.ರಘುಮೂರ್ತಿ

 

ಚಿತ್ರದುರ್ಗ:ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಸಬಾ, ದೊಡ್ಡ ಉಳ್ಳಾರ್ತಿ, ಪರಶುರಾಂಪುರ ಹೋಬಳಿಯ ಚೌಳೂರು, ಹಿರೇಕೆರೆ ಕಾವಲು, ತುರುವನೂರು ಹೋಬಳಿಯ ಬೆಳಗಟ್ಟ ಸೇರಿದಂತೆ ಚಳ್ಳಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 5 ಗೋಶಾಲೆ ಪ್ರಾರಂಭಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ದೇವರ ಎತ್ತುಗಳಿಗೆ ಮೇವು ಒದಗಿಸಲು ತಿಂಗಳಿಗೆ ರೂ.22 ಲಕ್ಷ ಅನುದಾನದ ಅವಶ್ಯಕತೆ ಇದೆ ಎಂದು ಸರ್ಕಾರದ ಗಮನಕ್ಕೆ ತಂದ ದೇವರ ಎತ್ತುಗಳ ಮೇವಿಗೆ ಸರ್ಕಾರದಿಂದ ರೂ.10 ಲಕ್ಷ ಅನುದಾನ ಮಂಜೂರಾಗಿದ್ದು, ಮೇವು ಪೂರೈಕೆ ಮಾಡಲಾಗಿದೆಯೇ ಎಂದು ಶಾಸಕ ರಘುಮೂರ್ತಿ ಪ್ರಶ್ನಿಸಿದರು.

ಇದನ್ನೂ ಓದಿ: ವಿಜಾಪುರ ಬಳಿ ಬಸ್ಸಿಗಾಗಿ ಕಾದು ಕುಳಿತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ|ಸ್ಥಳದಲೇ ವಿದ್ಯಾರ್ಥಿ ಸಾವು

ಇದಕ್ಕೆ ಪ್ರತಿಕ್ರಿಯಿಸಿದ ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಬಾಬುರತ್ನ ಅವರು ಈಗಾಗಲೆ 02 ಲೋಡ್ ಮೇವು ದೇವರ ಎತ್ತುಗಳಿಗಾಗಿ ಪೂರೈಕೆ ಮಾಡಲಾಗಿದೆ ಎಂದರು.  ಮೇವು ಪೂರ್ಯಕೆ ಕುರಿತು ಶಾಸಕರ ಗಮನಕ್ಕೆ ತಾರದೇ ಇರುವುದಕ್ಕೆ ರಘುಮೂರ್ತಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.  ಅಲ್ಲದೆ ತಡಮಾಡದೇ ಶೀಘ್ರವೇ ಮೇವು ಪೂರೈಕೆಗೆ ಕ್ರಮವಹಿಸಬೇಕು ಎಂದು ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಗೋಶಾಲೆಗಳ ಸಮರ್ಪಕ ನಿರ್ವಹಣೆಗೆ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಾಧಿಕಾರಿಯನ್ನು ನಿಯುಕ್ತಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಸಲಹೆ ನೀಡಿದರು.

[t4b-ticker]

You May Also Like

More From Author

+ There are no comments

Add yours