ರೈತರ ಸಾಲದ ಮೇಲಿನ ಬಡ್ಡಿ‌ ಮನ್ನಾ: ಸಿಎಂ ಸಿದ್ದರಾಮಯ್ಯ

 

 

 

 

ವಿಧಾನಸಭೆ/ವಿಧಾನಪರಿಷತ್ತು (ಸುವರ್ಣಸೌಧ, ಬೆಳಗಾವಿ):   ಬರಗಾಲದಿಂದ ಬೇಸತ್ತಿರುವ ರೈತರಿಗೆ ಎನರ್ಜಿ ಬುಸ್ಟ್ ನೀಡುವ ದೃಷ್ಟಿಯಿಂದ  ರೈತರು ಸಹಕಾರಿ ಬ್ಯಾಂಕು ಗಳಿಂದ(Cooperative Banks)ಪಡೆದಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ  ಸಾಲಗಳ ಮೇಲಿನ  ಬಡ್ಡಿಯನ್ನು  ಮನ್ನಾ ಮಾಡಲಾಗುವುದು ಎಂದು ಸಿಎಂ  ಸಿದ್ದರಾಮಯ್ಯ ಘೋಷಿಸಿದ್ದಾರೆ. ಅಸಲನ್ನು  ಕಾಲಮಿತಿಯೊಳಗೆ  ಪಾವತಿಸಿದವರಿಗೆ ಮಾತ್ರ ಈ ಬಡ್ಡಿ ಮನ್ನಾ ಭಾಗ್ಯ  ದೊರೆಯಲಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉಭಯ ಸದನಗಳಲ್ಲಿ ಉತ್ತರ ನೀಡಿದ  ಅವರು ಈ ವಿಚಾರವನ್ನು ಶುಕ್ರವಾರ ಪ್ರಕಟಿಸಿದರು.

 

 

‘ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ಭರವಸೆಯನ್ನು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿರಲಿಲ್ಲ . ಆದರೆ ಬರ ಮತ್ತು ರೈತರ ಸಂಕಷ್ಟದ ಕಾರಣದಿಂದ ಬಡ್ಡಿ ಮನ್ನಾ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದರು.

ಇದನ್ನೂ ಓದಿ: ನಾಳೆ ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಕರೆಂಟ್ ಇರಲ್ಲ

‘2018ರ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಪ್ರಕಟಿಸಿದ್ದ ಪ್ರಣಾಳಿಕೆಯಲ್ಲಿ ₹1 ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಆದ ಬಳಿಕ ಕೃಷಿ ಸಾಲ ಮನ್ನಾ ಮಾಡಲಿಲ್ಲ. ವಿಧಾನಪರಿಷತ್‌ನಲ್ಲಿ ವಿ.ಎಸ್‌. ಉಗ್ರಪ್ಪ ಅವರು ಈ ವಿಷಯ ಪ್ರಸ್ತಾಪಿಸಿದಾಗ, ‘ನಾವು ನೋಟು ಪ್ರಿಂಟ್‌ ಮಾಡುವ ಯಂತ್ರ ಇಟ್ಟಿಲ್ಲ’ ಎಂದು ಯಡಿಯೂರಪ್ಪ ಉತ್ತರ ಕೊಟ್ಟಿದ್ದರು’ ಎಂದು ಸಿದ್ದರಾಮಯ್ಯ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಟಾಂಗ್ ನೀಡಿದರು.

[t4b-ticker]

You May Also Like

More From Author

+ There are no comments

Add yours