ಅರ್ಜುನನಿಗೆ ಗುಂಡೇಟು ಬಿದ್ದಿದೆಯಾ, ಅರ್ಜುನ ಆನೆಯ ಸಾವಿನ ಸತ್ಯ ಬಿಚ್ಚಿಟ್ಟ ವೈದ್ಯ

 

ಹಾಸನ: ಅರ್ಜುನನ  ಸಾವಿನ ಬಗ್ಗೆ ಹಲವು ಊಹಾಪೋಹಗಳು ಎದ್ದಿವೆ. ಇದರ ನಡುಗೆ ಅರ್ಜುನನ  ಕಾಲಿಗೆ ಗುಂಟೇಟು ಬಿದ್ದಿದೆ ಎಂದು ಹೇಳುತ್ತಿರುವ ನಡುವೆ  , ಅರ್ಜುನನಿಗೆ  ಯಾವುದೇ ಗುಂಡೇಟು ಬಿದ್ದಿಲ್ಲ. ನಮ್ಮ ಕಾರ್ಯಾಚರಣೆ ತಂಡದ ಬಳಿ ಬಂದೂಕು ಇರಲಿಲ್ಲ. ನಮ್ಮ ಸಿಬ್ಬಂದಿ ಬಳಿ ಇದ್ದದ್ದು ಡಬಲ್ ಬ್ಯಾರೆಲ್ ಚರ್ರೆ ಕೋವಿ ಮಾತ್ರ ಅದರಲ್ಲಿ ಆನೆ ಸಾಯುವುದಿಲ್ಲ ಎಂದು ವನ್ಯಜೀವಿ ವೈದ್ಯ ರಮೇಶ್ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ  ಮಾತನಾಡಿದ ವೈದ್ಯರು  ಕಾರ್ಯಾಚರಣೆ ವೇಳೆ ಯಾವುದೇ ಲೋಪವಾಗಿಲ್ಲ,  ಕಾಡಾನೆ ದಾಳಿಯಿಂದ ಅರ್ಜುನ   (Arjuna)ಮೃತಪಟ್ಟಿದೆ. ಬಹುಶಃ ಮಾವುತ ವಿನು ಅರ್ಜುನನ ಮೇಲೆ ಇದ್ದಿದ್ದರೆ ಹೋರಾಟ ಮಾಡಬಹುದಿತ್ತಾ ಅಥವಾ ಆಗಲು ಹೀಗೆ ಆಗುತ್ತಿತ್ತ ಎಂದು ಹೇಳುವುದು ಕಷ್ಟ ಎಂದಿದ್ದಾರೆ. ಆ ಮೂಲಕ ಅರ್ಜುನನ ಸಾವಿನ ಬಗ್ಗೆ ಹರಡಿದ್ದ ಹಲವು ವದಂತಿಗಳಿಗೆ ಸತ್ಯಸತ್ಯತೆ ಬಗ್ಗೆ ಸತ್ಯಾಂಶ ಬಿಚ್ಚಿಟ್ಟಿದ್ದಾರೆ.

ಕಾರ್ಯಾಚರಣೆಯ  ಮಾಹಿತಿಯನ್ನು ಬಿಡಿಬಿಡಿಯಾಗಿ ಬಿಚ್ಚಿಟ್ಟ ವೈದ್ಯ ರಮೇಶ್ 

ಕಾರ್ಯಾಚರಣೆ ದಿನ ಡಿಸೆಂಬರ್ 4 ರಂದು ನಾನು ಮತ್ತು  ಆನೆ ಮಾವುತ ವಿನು, ಹಾಗೂ ಕರ್ನಾಟಕ ಭೀಮ ಆನೆ ಮಾವುತ ಗುಂಡ ಅರ್ಜುನನ ಮೇಲೆ ಕುಳಿತ್ತಿದ್ದೆವು. ಪ್ರಶಾಂತ್ ಆನೆ ಮೇಲೆ ಕೊಡಗಿನ ಡಿಆರ್​ಎಫ್​ಓ ರಂಜನ್ ಇದ್ದರು. ವಿಕ್ರಾಂತ್ ಹೆಸರಿನ ಒಂದು ಹಾಗೂ ಮತ್ತೊಂದು ಸಲಗ ಸೇರಿ ಎರಡು ಆನೆಗಳ ಸೆರೆಗೆ ಟಾರ್ಗೆಟ್ ಫಿಕ್ಸ್ ಆಗಿತ್ತು ಎಂದು ಕಾರ್ಯಾಚರಣೆಯ  ಮಾಹಿತಿ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಲೋಕಾ ಅದಾಲತ್‌ನಲ್ಲಿ ಡೈವರ್ಸ್ ಪಡೆಯಲು ಹೋದ ಜೋಡಿ ಒಂದಾದರೂ

ಏಕಾ ಏಕಿ ದಾಳಿ

ನಾನು ಡಾಟ್ ಮಾಡುತ್ತೇನೆ ಎಂದು ಹೇಳಿ ನಾನು ನನ್ನ ಅರವಳಿಕೆ ಸಜ್ಜು ಮಾಡಿಕೊಂಡೆ. ಪ್ರಸರ್  ಫಿಕ್ಸ್ ಮಾಡಿ ಡಾಟ್ ಮಾಡಲು ರೆಡಿಯಾಗಿದ್ದ ವೇಳೆಗೆ ಆ ಆನೆ ಏಕಾಏಕಿ ದಾಳಿ ಮಾಡಿತು. ಅದು ಮುಖವನ್ನು ಮುಂದೆ ಮಾಡಿ ಬಂದಿದ್ದರಿಂದ ನಾನು ಮುಖಕ್ಕೆ ಡಾಟ್ ಮಾಡಲು ಆಗಲಿಲ್ಲ. ಯಾವುದೇ ಆನೆಯ ಮುಖದ ಭಾಗಕ್ಕೆ ಹುಟ್ಟೆಗೆ ಇಂಜೆಕ್ಷನ್ ಹೊಡೆಯುವ ಹಾಗಿಲ್ಲ. ಆಕಸ್ಮಾತ್ ಹಾಗೆ ಇಂಜೆಕ್ಟ್ ಆದರೆ ಆನೆ ಜೀವಕ್ಕೆ ಅಪಾಯ ಇದೆ. ಹಾಗಾಗಿ ಆಗ ಡಾಟ್ ಮಾಡಲು ಆಗಲಿಲ್ಲ. ಏಕಾಏಕಿ ಅರ್ಜುನನ ಮೇಲೆ ಆನೆ ದಾಳಿ ಮಾಡಿದಾಗ ನಾವೆಲ್ಲ ಕೆಳಗೆ ಬೀಳುವಂತೆ ಆದೆವು. ಈ ವೇಳೆಯಲ್ಲಿ ನನ್ನ ಕೈಮಾಡಿಕೊಂಡೆ ಅರವಳಿಕೆ ಟ್ರಿಗರ್ ಆಗಿ ಫೈರ್ ಆಗಿದೆ. ಅದು ಆಕಾಶದ ಕಡೆಗೆ ಹಾರಿ ಕೆಳಗೆ ಬೀಳುವಾಗ ಪ್ರಶಾಂತ್ ಆನೆ ಕಾಲಿಗೆ ಬಿದ್ದಿದೆ. ಅದು ನನಗೆ ಮಾಹಿತಿ ಇರಲಿಲ್ಲ ಎಂದು ಹೇಳಿದ್ದಾರೆ.

[t4b-ticker]

You May Also Like

More From Author

+ There are no comments

Add yours