ಜಮೀನಿಗೆ ಹೋಗಲು ದಾರಿ ಸಮಸ್ಯೆಯೇ? ಸರ್ಕಾರದಿಂದ ಹೊಸ ನಿಯಮ

 

Bangalore: ರೈತರು ಜಮೀನುಗಳಿಗೆ ಸಾಗಲು ಕಾಲುದಾರಿ, ಬಂಡಿದಾರಿ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸುತ್ತಾರೆ. ಅದರಲ್ಲೂ ಖಾಸಗಿ ಜಮೀನುಗಳ ಮೂಲಕ ಸಾಗುವಾಗ ಹಲವು ಬಾರಿ ವಾಕ್ಸಮರ, ಹೊಡೆದಾಟಗಳು ನಡೆದ ಅನೇಕ ಪ್ರಕರಣಗಳಿಗೆ ಅಂತ್ಯ ಹಾಡಲು ಈಗ ಕರ್ನಾಟಕ ಸರ್ಕಾರ (Government of Karnataka)
ರೈತರ ಸಮಸ್ಯೆ ಬಗೆರಿಸಲು ಮುಂದಾಗಿದೆ.
ವಿಮಲಮ್ಮ ಸಿ. ಸರ್ಕಾರದ ಅಧೀನ ಕಾರ್ಯದರ್ಶಿ, ಕಂದಾಯ ಇಲಾಖೆ (ಭೂ ಮಂಜೂರಾತಿ-1) ಕಾಲುದಾರಿ, ಬಂಡಿದಾರಿ ವ್ಯವಸ್ಥೆ ಮಾಡುವ ಕುರಿತು ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ.
ಸುತ್ತೋಲೆಯ ವಿವರಗಳು; ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸುವ ಸಲುವಾಗಿ ಕ್ರಮವಹಿಸುವ ಕುರಿತು ಎಂಬ ವಿಷಯವನ್ನು ಸುತ್ತೋಲೆ ಒಳಗೊಂಡಿದೆ.
ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ‘ದಾರಿ’ ಸಮಸ್ಯೆ ಇದ್ದು, ಬಳಕೆದಾರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಸುತ್ತೋಲೆ ಹೇಳಿದೆ.
‘ದಾರಿ’ ಸಮಸ್ಯೆ ಬಹುಕಾಲದಿಂದಲೂ ಇದ್ದು, ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಷ್ಟ ಹೊಂದುತ್ತಿರುವುದು ಕೆಲವು ಮಾಧ್ಯಮಗಳಿಂದ ತಿಳಿದು ಬಂದಿರುತ್ತದೆ ಹಾಗೂ ಈ ಬಗ್ಗೆ ಸಾರ್ವಜನಿಕರಿಂದ ಮನವಿ/ ದೂರುಗಳು ಸ್ವೀಕೃತವಾಗಿರುತ್ತವೆ.
ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ದಾಗ್ಯೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಅಥವಾ ಅಂತಹ ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರ ಮಧ್ಯದ ವೈಯಕ್ತಿಕ ದ್ವೇಷ/ ಅಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿಗೆ ಬಹುತೇಕ ಕಾರಣಗಳಾಗಿರುವುದು ಕಂಡುಬರುತ್ತದೆ ಎಂದು ವಿವರಿಸಿದೆ.
ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 59 ರಲ್ಲಿ ‘ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು, ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್‌ನಲ್ಲಿ ನಮೂದು ಮಾಡಲು ಅವಕಾಶವಿದೆ.
The Indian Easement Act, 1882ರಂತೆ ಪ್ರತಿ ಜಮೀನಿನ ಮಾಲೀಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ (Easement) ಹಕ್ಕನ್ನು ಹೊಂದಿದ್ದು, ಇದಕ್ಕೆ ಬಾಜುದಾರರಿಂದ ಯಾವುದೇ ಹಸ್ತಕ್ಷೇಪಕ್ಕೆ ಅಥವಾ ಈ ಬಗ್ಗೆ ಸದರಿ ಹಕ್ಕನ್ನು ಕ್ಷೀಣಿಸುವುದಕ್ಕೆ ಸಾಧ್ಯವಿರುವುದಿಲ್ಲ ಎಂಬುದಾಗಿ  ತಿಳಿಸಲಾಗಿದ್ದು, ಈ ನಿಟ್ಟಿನಲ್ಲಿ ಕ್ರಮವಹಿಸಲು ಅವಕಾಶವಿದೆ.
ಅಲ್ಲದೇ, Code of Criminal Procedure, 19730 00 147 ರನ್ವಯ ‘ಭೂಮಿ ಮತ್ತು ನೀರಿನ ಹಕ್ಕಿನ ಉಪಯೋಗದ’ ಕುರಿತು ಸ್ಥಳೀಯ ಶಾಂತಿಗೆ ಭಂಗ ಉಂಟಾಗುವ ಸಂದರ್ಭಗಳಲ್ಲಿ ಅದನ್ನು ನಿವಾರಿಸಲು ಕಾನೂನು ರೀತ್ಯಾ ತಹಶೀಲ್ದಾರ್ ರವರು ತಾಲ್ಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿ ಕ್ರಮವಹಿಸುವ ಅಧಿಕಾರ ಹೊಂದಿರುತ್ತಾರೆ.
ಅದರಂತೆ, ತಾಲ್ಲೂಕಿನ ತಹಶೀಲ್ದಾರ್‌ಗಳು ನಕಾಶೆ ಕಂಡ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳಲ್ಲಿ ಅನ್ಯ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದೆ ಅಡ್ಡಿಪಡಿಸುವಂತಹ ಅಥವಾ ಬಳಸಲು ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸಿ ಅಂತಹ ತಿರುಗಾಡಲು ದಾರಿಗಳನ್ನು ಸುಗಮಗೊಳಿಸಲು ಕ್ರಮವಹಿಸುವಂತೆ ಸೂಚಿಸಿದೆ ಎಂದು ಸುತ್ತೋಲೆ ತಿಳಿಸಿದೆ.
[t4b-ticker]

You May Also Like

More From Author

+ There are no comments

Add yours