ಜಲಜೀವನ್ ಮಿಷನ್: ಆಟೋ ಪ್ರಚಾರ ಜಾಗೃತಿ ವಾಹನಕ್ಕೆ ಚಾಲನೆ

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.02:
ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಮನೆಗೆ ನಲ್ಲಿಯ ಮೂಲಕ ಶುದ್ಧ ಕುಡಿಯುವ ನೀರು-ಜಲಜೀವನ್ ಯೋಜನೆ ಕುರಿತು ಆಟೋ ಪ್ರಚಾರ ಮೂಲಕ ಜಾಗೃತಿ ಮೂಡಿಸುವ ವಾಹನಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ಚಾಲನೆ ನೀಡಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಅನುಷ್ಠಾನ ಬೆಂಬಲ ಸಂಪನ್ಮೂಲ ಸಂಸ್ಥೆ (ರೀಡ್ಸ್) ಇವರ ಸಹಯೋಗದಲ್ಲಿ ಚಾಲನ ನೀಡಲಾಯಿತು.
ಜಲಜೀವನ್ ಮಿಷನ್ ಮತ್ತು ಸ್ವಚ್ಚ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನೀರು ಮತ್ತು ನೈರ್ಮಲ್ಯ ಕುರಿತು ಹಾಗೂ ನೀರಿನ ಸಂರಕ್ಷಣೆ, ಸಮುದಾಯ ವಂತಿಗೆ ಸಂಗ್ರಹಣೆ, ಬೂದು ನೀರು ನಿರ್ವಹಣೆ, ಮಳೆನೀರು ಕೊಯ್ಲು ನಿರ್ವಹಣೆ ಬಗ್ಗೆ ಪ್ರತಿ ಗ್ರಾಮದಲ್ಲಿ ಆಟೋ ಪ್ರಚಾರ ವಾಹನದ ಮೂಲಕ ಜಾಗೃತಿ ಮೂಡಿಸಲಾಗುವುದು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಜಲಜೀವನ್ ಮಿಷನ್ ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಂಜುನಾಥ್ ನಾಡರ್, ಸ್ವಚ್ಛ ಭಾರತ್ ಮಿಷನ್ (ಗ್ರಾ) ಜಿಲ್ಲಾ ಸಮಾಲೋಚಕ ನಾಗರಾಜ್, ಪ್ರಮಿಳಾ, ವಿನಯ್ ಕುಮಾರ್, ಐಎಸ್‍ಅರ್‍ಎ ತಂಡದ ಸದಸ್ಯರಾದ ದಿವಾಕರ್, ಪ್ರತಾಪ್ ಇದ್ದರು.

 

 

[t4b-ticker]

You May Also Like

More From Author

+ There are no comments

Add yours