ಕೆಆರ್‌ಪಿಪಿ ಪಕ್ಷದಿಂದ ಐದು ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿದ ಜನಾರ್ದನ ರೆಡ್ಡಿ, ಹಿರಿಯೂರಿಗೆ ಅಭ್ಯರ್ಥಿ ಫಿಕ್ಸ್

 

ಗಂಗಾವತಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಗುರುವಾರದಂದು ಐದು ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. krpp party

ಬಳ್ಳಾರಿ ಜಿಲ್ಲೆಯ ಸಿರಗುಪ್ಪಕ್ಕೆ ಟಿ. ಧರೆಪ್ಪ ನಾಯಕ, ಕೊಪ್ಪಳ ಜಿಲ್ಲೆಯ ಎಸ್‌ಸಿ ಮೀಸಲು ಕ್ಷೇತ್ರ ಕನಕಗಿರಿಗೆ ಡಾ. ಚಾರುಲ್ ದಾಸರಿ, ವಿಜಯಪುರ ಜಿಲ್ಲೆಯ ನಾಗಠಾಣ ಕ್ಷೇತ್ರಕ್ಕೆ ಶ್ರೀಕಾಂತ್, ರಾಯಚೂರು ಜಿಲ್ಲೆಯ ಸಿಂಧನೂರು ಕ್ಷೇತ್ರಕ್ಕೆ ನೆಕ್ಕಂಟಿ ಮಲ್ಲಿಕಾರ್ಜುನ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿಗೆ ಎಚ್‌. ಮಹೇಶ್ ಅವರನ್ನು ಕಣಕ್ಕಿಳಿಸಲಾಗುವುದು ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ ಆದ್ಯತೆ ಕೊಟ್ಟು ಪ್ರಚಾರ ನಡೆಸುತ್ತಿರುವ ರೆಡ್ಡಿ ಈ ಭಾಗದ ಜಿಲ್ಲೆಗಳಲ್ಲಿ ಪ್ರಚಾರ ಸಭೆಗಳನ್ನು ನಡೆಸಿ ಅಲ್ಲಿಯೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿಕೊಂಡು ಬಂದಿದ್ದಾರೆ.  ಈಗಾಗಲೇ ಸ್ಥಳೀಯವಾಗಿ ಟಿಕೆಟ್ ನೀಡುವ ಬಗ್ಗೆಯೂ ಇವರಿಗೆ ಭರವಸೆ ನೀಡಿದ್ದರು. ಆ ಹೆಸರುಗಳನ್ನು ಈಗ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

[t4b-ticker]

You May Also Like

More From Author

+ There are no comments

Add yours