ಜನವರಿ 06 ರಂದು ಚಳ್ಳಕೆರೆ ಯಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ

 

chitradurga. 05:ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೇತೃತ್ವದಲ್ಲಿ ಜನವರಿ 6 ರಂದು ಬೆಳಿಗ್ಗೆ 10.30 ಗಂಟೆಗೆ ಚಳ್ಳಕೆರೆಯ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸಾರ್ವಜನಿಕರ ಕುಂದು ಕೊರತೆಗಳನ್ನು ಸ್ಥಳೀಯ ಮಟ್ಟದಲ್ಲಿ ನಿವಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜಿಲ್ಲಾಮಟ್ಟದ ಜನತಾ ದರ್ಶನ ಏರ್ಪಡಿಸಲಾಗುತ್ತಿದೆ.
ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಜನತಾ ದರ್ಶನದಲ್ಲಿ ಉಪಸ್ಥಿತರಿರುವರು. ಸಾರ್ವಜನಿಕರಿಂದ ಅರ್ಜಿಗಳನ್ನು ಪಡೆದು ಸ್ವೀಕೃತಿ ನೀಡುವ ಸಲುವಾಗಿ ಸಮರ್ಪಕ ರೀತಿಯಲ್ಲಿ ಕೌಂಟರ್‍ಗಳ ವ್ಯವಸ್ಥೆ ಮಾಡಲಾಗುವುದು.

ಇದನ್ನೂ ಓದಿ: ಹಳೆ ದ್ವೇಷದ ಹಿನ್ನೆಲೆ| ಹಬ್ಬದ ರಾತ್ರಿಯೇ ಯುವಕನ ಮರ್ಡರ್

ಸಾರ್ವಜನಿಕರು ತಮ್ಮ ಕುಂದುಕೊರತೆ ಕುರಿತ ಅಹವಾಲು, ಅರ್ಜಿಗಳನ್ನು ಜನವರಿ 6 ರಂದು ಜರಗುವ ಜನತಾ ದರ್ಶನದಲ್ಲಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
========

[t4b-ticker]

You May Also Like

More From Author

+ There are no comments

Add yours