ನಿಮಗೆ ಕೆಲಸ ಬೇಕೆ, ಸೆ.30 ಕ್ಕೆ ಮಿಸ್ ಮಾಡದೇ ನೇರ ಸಂದರ್ಶನಕ್ಕೆ ಹಾಜರಾಗಿ

 

ಚಿತ್ರದುರ್ಗ ಕರ್ನಾಟಕ ವಾರ್ತೆ ಸೆಪ್ಟಂಬರ್ 28:
ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಸೆಪ್ಟೆಂಬರ್ 30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಸಂದರ್ಶನದಲ್ಲಿ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಲಾಗುವುದು.
ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮೊ, ಬಿಎ , ಬಿಕಾಂ, ಬಿ.ಎಸ್ಸಿ ಮತ್ತು ಇತರೆ ಪದವೀಧರರು ಭಾಗವಹಿಸಬಹುದು. ಅಭ್ಯರ್ಥಿಗಳು 18 ರಿಂದ 30 ವರ್ಷದೊಳಗಿರಬೇಕು. ನೇರಸಂದರ್ಶನಕ್ಕೆ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋಸ್, ಆಧಾರ್ ಕಾರ್ಡ್ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ  ದೂರವಾಣಿ ಸಂಖ್ಯೆ 7022459064, 8105619020, 8310785143ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours