ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಅಕ್ಟೋಬರ್ 03:
ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಬಿ.ದುರ್ಗ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ತಣಿಗೆಹಳ್ಳಿ ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರನ್ನು ಮಾಸಿಕ ಗೌರವ ಧನ ರೂ. 12,000/- ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಪಿ.ಡಿ.ಓ, ಪಂಚಾಯ್ತಿ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು. ಈ ಮೇಲ್ವಿಚಾರಕರ ಸ್ಥಾನವು ಸಾಮಾನ್ಯ ಅಭ್ಯರ್ಥಿಗೆ ಮೀಸಲಾಗಿರುತ್ತದೆ.
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿರಬೇಕು. ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿಗಳಾದ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಟಿ.ಸಿ., ಮೀಸಲಾತಿ ಪ್ರಮಾಣ ಪತ್ರ, ಸ್ಥಳೀಯ ವಾಸಿ ದೃಢೀಕರಣ ಪತ್ರ, ಅಂಗವಿಕಲತೆ (ಇದ್ದಲ್ಲಿ ದೃಢೀಕರಣ ಪತ್ರ) ಸಲ್ಲಿಸಬೇಕು. ವಯಸ್ಕರ ಶಿಕ್ಷಣದಡಿ ನಡೆಯುತ್ತಿರುವ ಮುಂದುವರಿಕಾ ಕಲಿಕಾ ಕೇಂದ್ರಗಳ ಪ್ರೇರಕ, ಉಪಪ್ರೇರಕರು ಸಹ ಅರ್ಜಿ ಸಲ್ಲಿಸಬಹುದು. ಮೇಲ್ವಿಚಾರಕರಾಗಿ ನೇಮಕಗೊಂಡ ನಂತರ ಪ್ರೇರಕ, ಉಪಪ್ರೇರಕರ ಹುದ್ದೆಗೆ ರಾಜೀನಾಮೆ ನೀಡತಕ್ಕದ್ದು ಹಾಗೂ ಬಿಡುಗಡೆ ಪತ್ರವನ್ನು ಸಂಬಂಧಿಸಿದ ಇಲಾಖೆಯಿಂದ ಪಡೆದು ಕಚೇರಿಗೆ ಸಲ್ಲಿಸಬೇಕು. ಪ್ರೇರಕ, ಉಪಪ್ರೇರಕರಿಗೆ ಮೀಸಲಾತಿ ಅನ್ವಯಿಸುತ್ತದೆ.
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರಬೇಕು, ಗರಿಷ್ಠ ವಯೋಮಿತಿ-35 ವರ್ಷ. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ 8722313666 ಗೆ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ

 

 

[t4b-ticker]

You May Also Like

More From Author

+ There are no comments

Add yours