ನ್ಯಾಯಾಂಗ ಇಲಾಖೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 13:
ಚಿತ್ರದುರ್ಗ ನ್ಯಾಯಾಂಗ ಘಟಕಕ್ಕೆ ಮಂಜೂರಾಗಿರುವ ಶೀಘ್ರಲಿಪಿಗಾರರು ಗ್ರೇಡ್-III, ಬೆರಳಚ್ಚುಗಾರರು, ಬೆರಳಚ್ಚು-ನಕಲುಗಾರರು, ಆದೇಶ-ಜಾರಿಕಾರರು ಹಾಗೂ ಜವಾನರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಗಸ್ಟ್ 18 ಅರ್ಜಿ ಸಲ್ಲಿಸಲು ಕೊನೆಯ ದಿನ.
ಶೀಘ್ರಲಿಪಿಗಾರರು-1 ಹುದ್ದೆ, ಬೆರಳಚ್ಚುಗಾರರು-1 ಹುದ್ದೆ, ಬೆರಳಚ್ಚು-ನಕಲುಗಾರರು-1 ಹುದ್ದೆ, ಆದೇಶ-ಜಾರಿಕಾರರು-2 ಹುದ್ದೆ ಹಾಗೂ ಜವಾನ-27 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಸೂಚಿಸಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  http://districts.ecourts.gov.in/chitradurga-onlinerecruitment ರಲ್ಲಿ ನೀಡಲಾದ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಆನ್‍ಲೈನ್ ಮೂಲಕ ಅರ್ಜಿಗಳನ್ನು ಜುಲೈ 15 ರಿಂದ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 18 ರಾತ್ರಿ 11.59 ಗಂಟೆಗೆ ಕೊನೆಯ ದಿನ. ಭಾರತೀಯ ಸ್ಟೇಟ್ ಬ್ಯಾಂಕ್ ಚಲನ್ ಮುಖಾಂತರ ಶುಲ್ಕ ಪಾವತಿಸಲು ಆಗಸ್ಟ್ 20 ಕೊನೆಯ ದಿನವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುಖ್ಯ ಆಡಳಿತಾಧಿಕಾರಿ ಟಿ.ಪುರುಷೋತ್ತಮ ತಿಳಿಸಿದ್ದಾರೆ

[t4b-ticker]

You May Also Like

More From Author

+ There are no comments

Add yours