ವಿದ್ಯಾರ್ಥಿಗಳು ಜ್ಞಾನದ ಜೊತೆ ಕೌಶಲ್ಯಗಳನ್ನು ಪಡೆದಾಗ ಉತ್ತಮ ಉದ್ಯೋಗವಕಾಶ :ಡಾ.ಗುಡ್ಡದೇಶ್ವರಪ್ಪ

 

ಚಿತ್ರದುರ್ಗ: ವಿದ್ಯಾರ್ಥಿಗಳು ಜ್ಞಾನದ ಜೊತೆ ಕೌಶಲ್ಯಗಳನ್ನು ಪಡೆದಾಗ ಉತ್ತಮ ಉದ್ಯೋಗ ಅವಕಾಶಗಳನ್ನು ಪಡೆಯಬಹುದೆಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಗುಡ್ಡದೇಶ್ವರಪ್ಪ.ಹೆಚ್ ರವರು ಹೇಳಿದರು.

ಮಂಗಳವಾರದಂದು ಕಾಲೇಜಿನಲ್ಲಿ ನಡೆದ ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಅಂತರಿಕ ಗುಣಮಟ್ಟ ಭರವಸೆ ಕೋಶ ಸಂಯುಕ್ತವಾಗಿ ಏರ್ಪಡಿಸಿದ ವಿಶೇಷ ಉಪನ್ಯಾಸ ಮಾಲಿಕೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳು ನೀಡಿದ ಮಾಹಿತಿಯನ್ನು ಅಧ್ಯಯನದಲ್ಲಿ ಬಳಸಿಕೊಂಡು ಉತ್ತಮ ಅಂಕಗಳನ್ನು ಗಳಿಸಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಪಕರಾದ ಕೆ. ರಾಮ್‌ರಾವ್‌ರವರು ಪ್ರಥಮ ಬಿ.ಕಾಂ ವಿದ್ಯಾರ್ಥಿನಿಯರಿಗೆ “ಬ್ಯಾಂಕಿAಗ್ ಕ್ಷೇತ್ರದಲ್ಲಿ ಆಗುತ್ತಿರುವ ಆಧುನಿಕ ಬದಲಾವಣೆಗಳ” ಕುರಿತು ಉಪನ್ಯಾಸ ನೀಡಿದರು.
ಎಸ್.ಜೆ.ಎಂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಹೆಚ್.ಕೆ.ಶಿವಪ್ಪಯವರು ಅಂತಿಮ ಬಿ.ಕಾಂ ವಿದ್ಯಾರ್ಥಿನಿಯರಿಗೆ “ಕಾಸ್ಟಿಂಗ್ ವಿಷಯದ ಬಗ್ಗೆ” ಮತ್ತು ಡಾ.ಆರ್.ವಿ.ಹೆಗಡಾಳ್ ಅವರು ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿಯರಿಗೆ “ವಾಣಿಜ್ಯನ್ಯಾಯ ಕಾನೂನುಗಳ ಬಗ್ಗೆ” ಉಪನ್ಯಾಸ ನೀಡಿದರು.
ಕಾರ್ಯಕ್ರಮಕ್ಕೆ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ.ಸಿ.ಚನ್ನಕೇಶವ ಅವರು ಅಧ್ಯಕ್ಷತೆ ವಹಿಸಿದರು. ಸಹಾಯಕ ಪ್ರಾಧ್ಯಾಪಕರಾದ ಹೆಚ್.ಶಕುಂತಲ ಅವರು ಪ್ರಸ್ತಾವಿಕ ನುಡಿಗಳನ್ನು ಆಡಿದರು. ಐ.ಕ್ಯೂ.ಎ.ಸಿ ಸಂಚಾಲಕರಾದ ಪ್ರೊ.ಸಿ.ಬಸವರಾಜ ಮತ್ತು ಅರ್ಥಶಾಸ್ತç ವಿಭಾಗದ ಮುಖ್ಯಸ್ಥರಾದ ಲೀಲಾವತಿ ಅವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು, ವಿದ್ಯಾರ್ಥಿನಿಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

[t4b-ticker]

You May Also Like

More From Author

+ There are no comments

Add yours