ಮಂಗಳೂರು: ನಗರದಾದ್ಯಂತ ಭದ್ರತಾ ಸನ್ನದ್ಧತೆಯನ್ನು ಪರೀಕ್ಷಿಸುವ ಉದ್ದೇಶದಿಂದ ರಾಷ್ಟ್ರೀಯ ಭದ್ರತಾ ದಳ (NSG) ತಂಡವು ಜುಲೈ 22 ರಿಂದ 25ರವರೆಗೆ ‘ಭಯೋತ್ಪಾದನಾ ನಿಗ್ರಹ ಅಣಕು ಕಾರ್ಯಾಚರಣೆ’ ನಡೆಸಲಿದೆ.
ಈ ಕಾರ್ಯಾಚರಣೆಯು ಭದ್ರತಾ ಸನ್ನದ್ಧತೆಯನ್ನು ಪರೀಕ್ಷಿಸುವ ಉದ್ದೇಶದಿಂದ ಮಾತ್ರ ನಡೆಯಲಿದ್ದು, ಕಾರ್ಯಾಚರಣೆಯ ಅವಧಿಯಲ್ಲಿ ಸಂಚಾರ ನಿಯಂತ್ರಣ ಸೇರಿದಂತೆ ಭದ್ರತಾ ಸಿಬ್ಬಂದಿ ನೀಡುವ ನಿರ್ದೇಶನಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕಿದೆ.




