5 ವರ್ಷದ ಒಳಗಿನ ಮಕ್ಕಳಿಗೆ ಜೂ. 28ರ ಭಾನುವಾರ ದೇಶಾದ್ಯಂತ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ.
ಭಾರತ ಪೋಲಿಯೋ ಮುಕ್ತವಾಗಿದ್ದು, ಆದರೆ ಕೆಲವು ದೇಶಗಳಲ್ಲಿ ಪೋಲಿಯೋ ಇನ್ನೂ ಇದೆ. ಅದಕ್ಕಾಗಿ ನಿಮ್ಮ ಮಗುವಿನ ರಕ್ಷಣೆಯ ವಿಷಯದಲ್ಲಿ ತಪ್ಪು ಮಾಡದೇ ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಸಮುದಾಯ ಆಸ್ಪತ್ರೆಗಳು, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅಂಗನವಾಡಿ, ಆಶಾಕಾರ್ಯಕರ್ತೆಯರನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.



