ಕನ್ನಡತಿ, ಪಟಾಕಿ ಪೋರಿ ನಭಾ ನಟೇಶ್ ಸದ್ಯ ಟಾಲಿವುಡ್ ಮತ್ತು ಬಾಲಿವುಡ್ ಅಂಗಳದಲ್ಲಿ ಭರ್ಜರಿ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ತೆರೆಕಂಡ ಅವರ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ನಾಗಬಂಧಂ’ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದ್ದು, ನಭಾ ಅವರ ಅಭಿನಯ ಮತ್ತು ನೃತ್ಯಕ್ಕೆ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಮೇಲ್ನೋಟಕ್ಕೆ ಇದೊಂದು ಸಂಪೂರ್ಣ ಆಧ್ಯಾತ್ಮಿಕ ಹಿನ್ನೆಲೆಯ ಸಿನಿಮಾ ಎಂದು ಅನಿಸಿದರೂ, ಕಮರ್ಷಿಯಲ್ ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಮನರಂಜನಾತ್ಮಕ ಅಂಶಗಳೂ ಈ ಚಿತ್ರದಲ್ಲಿವೆ. ವರ್ಷಗಳ ಹಿಂದೆ ನಭಾ ನಟೇಶ್ ಅವರಿಗೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ಅವರ ಎಡ ಭುಜದ ಮೂಳೆ ಮುರಿದು ಗಂಭೀರವಾದ ಪೆಟ್ಟಾಗಿತ್ತು. ಇದಕ್ಕಾಗಿ ಅವರು ಪದೇ ಪದೇ ಸರಣಿ ಶಸ್ತ್ರಚಿಕಿತ್ಸೆಗಳಿಗೂ ಒಳಗಾಗಬೇಕಾಯಿತು. ಗಾಯದ ತೀವ್ರತೆಯಿಂದಾಗಿ ಸುದೀರ್ಘ ಕಾಲ ಚೇತರಿಸಿಕೊಳ್ಳುತ್ತಿದ್ದ ಅವರು, ಅನಿವಾರ್ಯವಾಗಿ ಚಿತ್ರರಂಗದಿಂದ ಕೆಲವು ಕಾಲ ಸಂಪೂರ್ಣ ದೂರ ಉಳಿದಿದ್ದರು.ಇದೀಗ ಎಲ್ಲ ನೋವುಗಳನ್ನು ಮೆಟ್ಟಿ ನಿಂತು ‘ನಾಗಬಂಧಂ’ ಮೂಲಕ ಭರ್ಜರಿ ಸಕ್ಸಸ್ ಜೊತೆಗೆ ಕಮ್ಬ್ಯಾಕ್ ಮಾಡಿರುವ ನಭಾಗೆ, ಪ್ರೇಕ್ಷಕರು ನೀಡಿದ ಅಭೂತಪೂರ್ವ ಬೆಂಬಲ ಮತ್ತು ಪ್ರೀತಿ ಅಪಾರ ಖುಷಿ ತಂದಿದೆ.
ಭರತ್ ಕೃಷ್ಣಮಾಚಾರಿ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಸ್ಯಾಂಡಲ್ವುಡ್ನ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ಸಂಯೋಜಿಸುತ್ತಿದ್ದು, ಬಾಹುಬಲಿ ಆರ್ ಆರ್ ಆರ್ ಖ್ಯಾತಿಯ ಸೆಂತಿಲ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ತೆರೆಗೆ ಬರಲು ಸಜ್ಜಾಗುತ್ತಿದೆ.



